ಮೂಲೇಲಿ ಕೂರುವ ಜಾಯಮಾನ ನನ್ನದಲ್ಲ: ನಿಖಿಲ್ ಕುಮಾರಸ್ವಾಮಿ
ಹಾಸನ: ಮೂಲೇಲಿ ಕೂರುವ ಜಾಯಮಾನ ನನ್ನದಲ್ಲ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನನ್ನ ಜೀವನದ ಸ್ಪೂರ್ತಿ ದೇವೇಗೌಡರು. ನನ್ನ ಜವಾಬ್ದಾರಿಯನ್ನು ಅರಿತಿದ್ದೇನೆ. ಅನಿರೀಕ್ಷಿತವಾದ ಬೆಳವಣಿಗೆಯಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಬೇಕಾಗಿ ಬಂತು. ಈ ಚುನಾವಣೆಯ ಸೋಲಿನ ಬಗ್ಗೆ ಹೆಚ್ಚಾಗಿ ಪರಾಮರ್ಶೆ ಮಾಡಲ್ಲ ಎಂದರು.
ಇನ್ನೂ ಕರ್ನಾಟಕ ರಾಜ್ಯದಲ್ಲಿ ಕಟ್ಟಿರುವ ರೈತ ಪರವಾದ ಪಕ್ಷ, ಪ್ರಾದೇಶಿಕ ಪಕ್ಷ ಜೆಡಿಎಸ್. ಲಕ್ಷಾಂತರ ಕಾರ್ಯಕರ್ತರ ದುಡಿಮೆ, ಎಲ್ಲಾ ತಂದೆ, ತಾಯಿಯರ ಆಶೀರ್ವಾದ, ರೈತರ ಆಶೀರ್ವಾದ ಮಾಡಿ ಇಲ್ಲಿಯವರೆಗೆ ಬೆಳೆಸಿ, ಉಳಿಸಿದ್ದೀರಿ. ಹಲವಾರು ಸಂದರ್ಭದಲ್ಲಿ ಅಖಾಡ ಸಿದ್ಧವಾಗಿತ್ತು. ಬಹಳ ಸುಲಭವಾಗಿ ಶಾಸಕನಾಗಬಹುದಿತ್ತು.
ಆದರೆ ಇಲ್ಲಿಯವರೆಗೂ ನಾನು, ಪಕ್ಷ ಸಂಕಷ್ಟದಲ್ಲಿತ್ತು. ಆ ಸಂದರ್ಭದಲ್ಲಿ ಒಬ್ಬ ಪಕ್ಷದ ಶಿಸ್ತಿನ ಸಿಪಾಯಿಯಾಗಿ, ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಪಕ್ಷದ ಕಾರ್ಯಕರ್ತರ ಭಾವನೆಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ. 19 ಸ್ಥಾನ ಗೆದ್ದು 18ಕ್ಕೆ ಇಳಿದಿದ್ದೇವೆ. ನಿಮ್ಮೆಲ್ಲರ ಆಶೀರ್ವಾದಿಂದ ಇಡೀ ರಾಜ್ಯ ಪ್ರವಾಸ ಮಾಡುತ್ತೇನೆ. ಮೂಲೇಲಿ ಕೂರುವ ಜಾಯಮಾನ ನನ್ನದಲ್ಲ ಎಂದು ಹೇಳಿದರು..