ಹಣಕಾಸಿನ ವಿಚಾರಕ್ಕೆ ಕಿರಿಕ್: ಬೆಂಗಳೂರಿನಲ್ಲಿ ವ್ಯಕ್ತಿಯ ಭೀಕರ ಕೊಲೆ!
ಬೆಂಗಳೂರು:- ಹಣಕಾಸಿನ ವಿಚಾರಕ್ಕೆ ವ್ಯಕ್ತಿಯೋರ್ವನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಧ್ರಳ್ಳಿಯ ಅನುಪಮ ಶಾಲೆ ಬಳಿ ಜರುಗಿದೆ.
36 ವರ್ಷದ ಅಭಿಷೇಕ್ ಕೊಲೆಯಾದ ವ್ಯಕ್ತಿ. ಘಟನೆ ಸಂಬಂಧ ಬ್ಯಾಡರಹಳ್ಳಿ ಪೊಲೀಸರು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಕಾರ್ತಿಕ್,ಚೇತನ್ ಬಂಧಿತ ಆರೋಪಿಗಳು.
ಕಳೆದ ಎರಡು ದಿನಗಳ ಹಿಂದೆ ಈ ಗಲಾಟೆ ನಡೆದಿತ್ತು. ಖಡ್ಗದಿಂದ ಅಭಿಷೇಕ್ ತಲೆಗೆ ರಾರ್ತಿಕ್ ಹೊಡೆದಿದ್ದ. ಗಾಯಗೊಂಡು ಅಭಿ ಆಸ್ಪತ್ರೆ ಸೇರಿದ್ದ. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅಭಿಷೇಕ್ ಸಾವನ್ನಪ್ಪಿದ್ದಾನೆ.
ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.