ನಟ ದರ್ಶನ್ ಗೆ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ: ಫೋಟೊ ವೈರಲ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಪಟ್ಟಂತೆ ದರ್ಶನ್ ಅವರಿಗೆ ಬೆನ್ನು ನೋವಿನ ಸಮಸ್ಯೆ ಇದೆ. ಬಳ್ಳಾರಿ ಜೈಲಿನಲ್ಲಿ ಇದ್ದಾಗ ಅವರಿಗೆ ತೀವ್ರ ನೋವು ಕಾಣಿಸಿಕೊಂಡಿತ್ತು. ಹಾಗಾಗಿ ವಿವಿಧ ಪರೀಕ್ಷೆ ಮಾಡಿ ಕೂಡಲೇ ಶಸ್ತ್ರ ಚಿಕಿತ್ಸೆಯ ಅಗತ್ಯ ಇದೆ ಎಂದು ವೈದ್ಯರು ಸಲಹೆ ನೀಡಿದ್ದರು. ಹಾಗಾಗಿ ಅವರಿಗೆ ಹೈಕೋರ್ಟ್ನಲ್ಲಿ ಮಧ್ಯಂತರ ಜಾಮೀನು ನೀಡಲಾಯಿತು.
ಇನ್ನೂ ಸದ್ಯ ದರ್ಶನ್ ಅವರು ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜಿಎಸ್ನ ವಿಶೇಷ ಕೋಣೆಯಲ್ಲಿ ದರ್ಶನ್ಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಲ್ಲಿ ಬಿಗಿ ಭದ್ರತೆ ಒದಗಿಸಲಾಗಿದೆ. ಅಧಿಕ ರಕ್ತದೊತ್ತಡ ಇರುವ ಕಾರಣ ದರ್ಶನ್ಗೆ ಇನ್ನೂ ಶಸ್ತ್ರಚಿಕಿತ್ಸೆ ಮಾಡಿಸಿಲ್ಲ ಎಂದು ವೈದ್ಯರ ವರದಿ ಹೇಳಿದೆ. ಈಗ ಅವರು ಚಿಕಿತ್ಸೆ ಪಡೆಯುತ್ತಿರುವ ಫೋಟೋ ಸಿಕ್ಕಿದೆ. ಸದ್ಯ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ