ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಬದಲಾವಣೆ ಪ್ರಶ್ನೆಯೇ ಇಲ್ಲ: ಡಾ.ಎಂ.ಸಿ.ಸುಧಾಕರ್
ಬೆಳಗಾವಿ: ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಬಗ್ಗೆ ನಗರದಲ್ಲಿ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಬದಲಾವಣೆ ಪ್ರಶ್ನೆಯೇ ಇಲ್ಲ. ಸಿದ್ದರಾಮಯ್ಯ ಅವರು ಬಲಿಷ್ಠರಾಗಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಜನರಿಗೆ ನಮ್ಮ ಕಾರ್ಯಕ್ರಮ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಜನರ ವಿಶ್ವಾಸ ಉಳಿಸಿಕೊಂಡು ಹೋಗುತ್ತೇವೆ ಎಂದು ಹೇಳಿದ್ದಾರೆ.
ಇನ್ನೂ ಇತ್ತಿಚೆಗೆ ಮೂರು ಕ್ಷೇತ್ರಗಳಲ್ಲಿ ನಡೆದ ಉಪ ಚುನಾವಣೆಯಲ್ಲಿ ಜಯ ಗಳಿಸಿದ್ದೇವೆ. ಹಾಗಾಗಿ, ಬಿಜೆಪಿಯವರು ಎಷ್ಟೇ ಟೀಕೆ ಮಾಡಲಿ, ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸಲಿ. ನಮ್ಮ ಸರ್ಕಾರ ಮತ್ತಷ್ಟು ಸದೃಢವಾಗುತ್ತದೆ ಎಂದು ತಿರುಗೇಟು ಕೊಟ್ಟಿದ್ದಾರೆ.