ನಾಳೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಫಡ್ನವಿಸ್ ಪ್ರಮಾಣವಚನ ಸ್ವೀಕಾರ!
ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಯಾರೆಂಬುದರ ಬಗ್ಗೆ ಕುತೂಹಲ ಮುಂದುವರಿದಿತ್ತು. ಇದೀಗ ಇಂದು ಮುಂಬೈಯಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು, ನಾಳೆ ಸಂಜೆ ಮುಂಬೈನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ದೇವೇಂದ್ರ ಫಡ್ನವೀಸ್ ರವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಶಾಸಕಾಂಗ ಪಕ್ಷದ ಸಭೆಗೂ ಮುನ್ನ ಇಲ್ಲಿ ನಡೆದ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಫಡ್ನವೀಸ್ ಅವರ ಹೆಸರನ್ನು ಶಾಸಕ ಪಕ್ಷದ ನಾಯಕ ಸ್ಥಾನಕ್ಕೆ ಸೂಚಿಸಲಾಯಿತು. ಮಹಾಯುತಿ ಒಕ್ಕೂಟದ ನಾಯಕರು ಇಂದು ಅಪರಾಹ್ನ 3.30ಕ್ಕೆ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ ಎಂದು ಬಿಜೆಪಿ ನಾಯಕ ಸುಧೀರ್ ಮುಂಗಂತಿವಾರ್ ತಿಳಿಸಿದ್ದಾರೆ.