ನಾವೆಲ್ಲರೂ ಕುಳಿತು ಚರ್ಚೆ ಮಾಡುತ್ತೇವೆ, ನಾಳೆ ಎಲ್ಲಾ ಸಮಸ್ಯೆ ಬಗೆಹರಿಯಲಿದೆ: ಯಡಿಯೂರಪ್ಪ
ಶಿವಮೊಗ್ಗ: ನಾವೆಲ್ಲರೂ ಕುಳಿತು ಚರ್ಚೆ ಮಾಡುತ್ತೇವೆ, ನಾಳೆ ಎಲ್ಲಾ ಸಮಸ್ಯೆ ಬಗೆಹರಿಯಲಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಏತನ್ಮಧ್ಯೆ, ಬಿಜೆಪಿ ಕೋರ್ ಕಮಿಟಿ ಸಭೆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು. ಇನ್ನೂ ಅಧಿವೇಶನದಲ್ಲಿ ಚರ್ಚಿಸಬೇಕಾದ ವಿಚಾರಗಳ ಬಗ್ಗೆ ಮಾತುಕತೆ ನಡೆಯುತ್ತಿದೆ.
ಬಸನಗೌಡ ಪಾಟೀಲ್ ಯತ್ನಾಳ್ ಕರೆಸಿ, ನಾವೆಲ್ಲರೂ ಕುಳಿತು ಚರ್ಚೆ ಮಾಡುತ್ತೇವೆ. ಎಲ್ಲಾ ಒಟ್ಟಾಗಿ ಅಧಿವೇಶನ ಎದುರಿಸಬೇಕಿದೆ. ನಾವೆಲ್ಲರೂ ಒಟ್ಟಾಗಿ ಹೋಗಬೇಕು ಎಂಬುದು ನನ್ನ ಅಪೇಕ್ಷೆ. ರಾಜ್ಯದಲ್ಲಿ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಸಲಹೆ ಕೊಡುತ್ತೇನೆ. ನಾಳೆ ಎಲ್ಲಾ ಸಮಸ್ಯೆ ಬಗೆಹರಿಯಲಿದೆ. ಒಗ್ಗಟ್ಟಾಗಿ ಅಧಿವೇಶನ ಎದುರಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.