ಮಕ್ಕಳನ್ನು ಉಳಿಸುವ ಕೆಲಸ ಮಾಡದೆ ಸಮಾವೇಶ ಮಾಡಿದ್ರೆ ಪಾಪ ತಟ್ಟಲಿದೆ: ಆರ್‌.ಅಶೋಕ್‌

Date:

ಮಕ್ಕಳನ್ನು ಉಳಿಸುವ ಕೆಲಸ ಮಾಡದೆ ಸಮಾವೇಶ ಮಾಡಿದ್ರೆ ಪಾಪ ತಟ್ಟಲಿದೆ: ಆರ್‌.ಅಶೋಕ್‌

ಬೆಂಗಳೂರು: ಮಕ್ಕಳನ್ನು ಉಳಿಸುವ ಕೆಲಸ ಮಾಡದೆ ಸಮಾವೇಶ ಮಾಡಿದ್ರೆ ಪಾಪ ತಟ್ಟಲಿದೆ ಎಂದು ತಿಪಕ್ಷ ನಾಯಕ ಆರ್‌.ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೋವಿಡ್‌ ಸಮಯದಲ್ಲಿ ರಾಹುಲ್‌ ಗಾಂಧಿ, ಡಿ.ಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ, ಜನರ ಬಳಿಗೆ ಹೋಗಿ ಟವೆಲ್‌ನಲ್ಲಿ ಕಣ್ಣೀರು ಒರೆಸಿಕೊಂಡರು. ಈಗ ತಾಯಂದಿರು ಸತ್ತಿರುವಾಗ ಜನಕಲ್ಯಾಣ ಸಮಾವೇಶ ಮಾಡಿದ್ದಾರೆ.
ಆ ಸಮಾವೇಶದಲ್ಲಿ ರಾಜಕೀಯ ಮಾತಾಡುವುದು ಬಿಟ್ಟರೆ, ಜನರ ಪರವಾಗಿ ಮಾತಾಡಿಲ್ಲ. 28 ಔಷಧಿಗಳು ಕಳಪೆ ಎಂದಮೇಲೂ ಅದೇ ಕಂಪನಿಯಿಂದ ಔಷಧಿ ಖರೀದಿಸಲಾಗಿದೆ. ಮಕ್ಕಳನ್ನು ಉಳಿಸುವ ಕೆಲಸ ಮಾಡದೆ ನೂರು ಸಮಾವೇಶ ಮಾಡಿದರೂ ಶಾಪ ಹಾಗೂ ಪಾಪ ತಟ್ಟಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ಮಾಡಿದ ನಂತರವೂ ತಾಯಂದಿರು ಸಾಯುತ್ತಿದ್ದಾರೆ ಎಂದು ಮುಖ್ಯಮಂತ್ರಿಗೆ ಸರ್ಕಾರದಲ್ಲಿ ಹಿಡಿತವಿಲ್ಲ ಎಂದರ್ಥ. ಈ ಸಾವಿನ ಹೊಣೆಯನ್ನು ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಹೇಳಿದರು.

Share post:

Subscribe

spot_imgspot_img

Popular

More like this
Related

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು ಹಾಕಿದ ದುಷ್ಕರ್ಮಿಗಳು

ಹಣಕಾಸು ವಿಚಾರಕ್ಕೆ ಯುವಕನ ಬರ್ಬರ ಹತ್ಯೆ! ಸಾಕ್ಷ್ಯವೇ ಸಿಗದಂತೆ ಶವ ಸುಟ್ಟು...

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್

ಇರಾನ್ ದಾಳಿ ಶಂಕೆ: ಅಮೆರಿಕದ F-35 ಯುದ್ಧವಿಮಾನ ತುರ್ತು ಲ್ಯಾಂಡಿಂಗ್ ಟೆಹ್ರಾನ್: ಇರಾನ್...

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು!

ಯುಗಾದಿ ಹೊಸತೊಡಕು ಜೋರು: ಮಾಂಸದಂಗಡಿ ಮುಂದೆ ಕ್ಯೂ ನಿಂತ ಜನರು! ಬೆಂಗಳೂರು: ಯುಗಾದಿ...