No menu items!
3.9 C
Munich
Wednesday, September 23, 2026

ನಾನು ಚಾಮರಾಜನಗರಕ್ಕೆ ಬಂದಾಗಲೆಲ್ಲ ಅಧಿಕಾರ ಕಳೆದುಕೊಂಡಿಲ್ಲ: ಸಿಎಂ ಸಿದ್ದರಾಮಯ್ಯ

Must read

ನಾನು ಚಾಮರಾಜನಗರಕ್ಕೆ ಬಂದಾಗಲೆಲ್ಲ ಅಧಿಕಾರ ಕಳೆದುಕೊಂಡಿಲ್ಲ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ನಾನು ಚಾಮರಾಜನಗರಕ್ಕೆ ಬಂದಾಗಲೆಲ್ಲ ಅಧಿಕಾರ ಕಳೆದುಕೊಂಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸತ್ತೇಗಾಲ ಸರ್ಕಾರಿ ಶಾಲಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಏನಿಲ್ಲ ಅಂದ್ರು 20 ಬಾರಿ ಚಾಮರಾಜನಗರಕ್ಕೆ ಬಂದಿದ್ದೇನೆ. ನಾನು ಚಾಮರಾಜನಗರಕ್ಕೆ ಬಂದಾಗಲೆಲ್ಲ ಅಧಿಕಾರ ಕಳೆದುಕೊಂಡಿಲ್ಲ. ಬದಲಿಗೆ ಸಿಎಂ ಖುರ್ಚಿ ಗಟ್ಟಿಯಾಗಿದೆ. ನಾನು ಈಗ ರಾಜಕೀಯ ಕೊನೆಗಾಲದಲ್ಲಿದ್ದೇನೆ. ಜನರ ಪ್ರೀತಿ ಅಭಿಮಾನ ಗಳಿಸದೆ ಇದ್ರೆ ರಾಜಕೀಯದಲ್ಲಿ ಉಳಿಗಾಲ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಈ ಬಿಜೆಪಿಯವ್ರು ನಾವು ಕೊಡೊ ಗೃಹಲಕ್ಷ್ಮಿ ಯೋಜನೆಯಿಂದ ಅತ್ತೆ-ಸೊಸೆಗೆ ಜಗಳ ತಂದಿಟ್ರು ಎಂದು ಅಪಪ್ರಚಾರ ಮಾಡಿದ್ರು. ಬಿಜೆಪಿಯವರಿಗೆ ಬರಿ ಇದೆ ಕೆಲಸ. ನಿಮಗೆ ಉಚಿತವಾಗಿ ಅಕ್ಕಿ ಕೊಡ್ತಾಯಿರೋರು ಯಾರು? ನಾನು ಮೊದಲು ಬಾರಿ ಸಿಎಂ ಆದಾಗ 5 ಕೆಜಿ ಉಚಿತವಾಗಿ ಕೊಟ್ಟೆ. ಈಗ 10 ಕೆಜಿ ನೀಡುತ್ತೇವೆ ಅಂದ್ರೆ ಕೇಂದ್ರದವರು ಅಡ್ಡಗಾಲು ಹಾಕಿದ್ದಾರೆ. ಫ್ರೀಯಾಗಿ ಏನನ್ನೂ ಕೊಡ್ಬೇಡಿ ಮೋದಿಯವರೇ, ಒಂದು ಕೆಜಿಗೆ 34 ರೂಪಾಯಿ ಕೊಡುತ್ತೇವೆ ಎಂದು ತಿಳಿಸಿದ್ದಾರೆ.

- Advertisement -spot_img

More articles

- Advertisement -spot_img

Latest article