ಯಾವುದೇ ಒಂದು ಸರ್ಕಾರಿ ಆಸ್ಪತ್ರೆ ಬಗ್ಗೆ ಸರ್ಕಾರ ಗಮನ ಕೊಟ್ಟಿಲ್ಲ: ಛಲವಾದಿ ನಾರಾಯಣಸ್ವಾಮಿ
ಬೆಳಗಾವಿ: ಯಾವುದೇ ಒಂದು ಸರ್ಕಾರಿ ಆಸ್ಪತ್ರೆ ಬಗ್ಗೆ ಸರ್ಕಾರ ಗಮನ ಕೊಟ್ಟಿಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಬಾಣಂತಿಯರು, ಹಸುಗೂಸುಗಳು ತೀರಿಕೊಂಡು ಹೋಗಿರುವುದನು ಗಮನಿಸಿದರೆ, ಇಡೀ ರಾಜ್ಯಾದ್ಯಂತ ಒಂದು ಗೊಂದಲದ ವಾತಾವರಣ ಸೃಷ್ಟಿಯಾಗಿದೆ. ಆಸ್ಪತ್ರೆಗಳು ಶವಾಗಾರ ಆಗುತ್ತಿರುವ ಪರಿಸ್ಥಿತಿ ಬಂದಿದೆ. ಇದಕ್ಕೆ ನೇರ ಕಾರಣ ಕಾಂಗ್ರೆಸ್ ಸರ್ಕಾರಎಂದು ದೂರಿದ್ದಾರೆ.
ಇನ್ನೂ ಯಾವುದೇ ಒಂದು ಸರ್ಕಾರಿ ಆಸ್ಪತ್ರೆ ಬಗ್ಗೆ ಸರ್ಕಾರ ಗಮನ ಕೊಟ್ಟಿಲ್ಲ. ಅವರು ಅಧಿಕಾರದ ದಾಹದಲ್ಲಿ ಏನೆಲ್ಲಾ ಭ್ರಷ್ಟಾಚಾರ ಮಾಡಬಹುದು..? ಇಂಥಹದರಲ್ಲಿ ತೊಡಗಿರುವುದರಿಂದ, ಆಸ್ಪತ್ರೆಗಳ ಮೇಲೆ ಸರ್ಕಾರಕ್ಕೆ ನಿಯಂತ್ರಣ ಇಲ್ಲವೇ ಇಲ್ಲ. ಕಳಪೆ ಔಷಧಿಗಳನ್ನು ಕೊಟ್ಟಿದ್ದರಿಂದಲೇ ಇಂಥ ಘಟನೆಗಳು ನಡೆದಿವೆ. ಈ ಸಮಸ್ಯೆ ಬಗ್ಗೆ ಸದನದಲ್ಲಿ ನಾವು ಧ್ವನಿ ಎತ್ತುತ್ತೇವೆ ಎಂದು ಹೇಳಿದ್ದಾರೆ.