ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ!

Date:

ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
“ಮುತ್ಸದ್ದಿ ರಾಜಕಾರಣಿಯಾಗಿದ್ದ ಕೃಷ್ಣ ಅವರು ಅಜಾತಶತ್ರುಗಳಾಗಿದ್ದರು. ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಪ್ರಾರಂಭದ ದಿನಗಳಲ್ಲಿ‌ ನನಗೆ ಮಾರ್ಗದರ್ಶಕರಾಗಿದ್ದ ಕೃಷ್ಣ ಅವರು ಸದಾ ನನ್ನ ಹಿತೈಷಿಗಳಾಗಿದ್ದರು. ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳ ದು:ಖದಲ್ಲಿ‌ ನಾನೂ ಭಾಗಿಯಾಗಿದ್ದೇನೆ.‌ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು:...

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ ಬೆಂಗಳೂರು:...