ಹೃದಯಾಘಾತದಿಂದ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ ನಿಧನ!

Date:

ಹೃದಯಾಘಾತದಿಂದ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್.ಜಯಣ್ಣ ನಿಧನ!

ಕೊಳ್ಳೇಗಾಲ ಮಾಜಿ ಶಾಸಕ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದ ಎಸ್ ಜಯಣ್ಣ ಅವರು ಹೃದಯಾಘಾತದಿಂದ ನಿಧನಹೊಂದಿದ್ದಾರೆ. ನಾಳೆ ಗೃಹ ಪ್ರವೇಶ ಹಿನ್ನಲೆ ಆಹ್ವಾನ ಪತ್ರಿಕೆ ಕೊಡಲು ಮೈಸೂರಿಗೆ ತೆರಳುತ್ತಿದ್ದ ವೇಳೆ ಜಯಣ್ಣ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೊಳ್ಳೇಗಾಲ ತಾಲೂಕಿನ ಉತ್ತಂಬಳ್ಳಿ ಬಳಿ ಘಟನೆ ನಡೆದಿದ್ದು,
ಜಯಣ್ಣ ಅವರಿಗೆ 72 ವರ್ಷ ವಯಸ್ಸಾಗಿತ್ತು 1994 ಹಾಗು 2013 ರಲ್ಲಿ ಶಾಸಕರಾಗಿದ್ದ ಎಸ್ ಜಯಣ್ಣ ಅವರಿಗೆ ಅನಾರೋಗ್ಯದ ಹಿನ್ನಲೆ 2018ರಲ್ಲಿ ಟಿಕೆಟ್ ಕೊಟ್ಟಿರಲಿಲ್ಲ. ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
1994 ರಲ್ಲಿ ಜನತಾದಳ ಹಾಗು 2013ರಲ್ಲಿ ಕಾಂಗ್ರೆಸ್ ಪಕ್ಷದಿಂದ ಕೊಳ್ಳೇಗಾಲ ಶಾಸಕರಾಗಿ ಆಯ್ಕೆಯಾಗಿದ್ದ ಎಸ್ ಜಯಣ್ಣ ಅವರು ಸಿಎಂ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಜಯಣ್ಣ ಅವರನ್ನು ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು.

Share post:

Subscribe

spot_imgspot_img

Popular

More like this
Related

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು?

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು? ನಮ್ಮ...

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...