ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಕೀರ್ತಿ ಸುರೇಶ್!
ಬಾಲ ನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟ ಕೀರ್ತಿ ಸುರೇಶ್ ಅವರು ತೆಲುಗು ಮಾತ್ರವಲ್ಲದೆ ತಮಿಳು, ಮಲಯಾಳಂ ಸಿನಿಮಾಗಳಲ್ಲಿ ನಟಿಸಿಯೂ ಅವರು ಜನಪ್ರಿಯತೆ ಪಡೆದಿದ್ದಾರೆ. ಸದ್ಯ ನಟಿ ಕೀರ್ತಿ ಸುರೇಶ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಬಹುದಿನದ ಗೆಳೆಯ ಆಂಟೋನಿ ಥಟ್ಟಿಲ್ ಅವರನ್ನು ಗೋವಾದಲ್ಲಿ ಇಂದು ಮದುವೆಯಾಗಿದ್ದಾರೆ.
ಎರಡೂ ಕುಟುಂಬದ ಸದಸ್ಯರು ಹಾಗೂ ಚಿತ್ರರಂಗದ ಕೆಲವೇ ಕೆಲವು ಗಣ್ಯರ ಸಮ್ಮುಖದಲ್ಲಿ ಕೀರ್ತಿ ಸುರೇಶ್ ಮದುವೆ ಆಗಿದ್ದಾರೆ. ಪಕ್ಕಾ ಹಿಂದೂ ಸಂಪ್ರದಾಯದಂತೆ ವಿವಾಹವಾಗಿದ್ದಾರೆ. ಫೋಟೊಗಳನ್ನು ಅಭಿಮಾನಿಗಳು ಹಾಗೂ ಚಿತ್ರರಂಗದ ಗಣ್ಯರು ಈ ಜೋಡಿಗೆ ಶುಭ ಹಾರೈಸುತ್ತಿದ್ದಾರೆ.
ಕೀರ್ತಿ ಸುರೇಶ್ ಅವರು ಕೆಂಪು ಬಣ್ಣದ ಸೀರೆಯಲ್ಲಿ ಮಿರ ಮಿರ ಮಿಂಚಿದ್ದಾರೆ. ಆ ಸೀರೆಯ ಜೊತೆಗೆ ಕೆಂಪು ಮುತ್ತಿನ ಗ್ರ್ಯಾಂಡ್ ನೆಕ್ಲೆಸ್ ಹಾಗೂ ಮ್ಯಾಚಿಂಗ್ ಇಯರಿಂಗ್ಸ್ ಧರಿಸಿದ್ದರು. ಗಂಡನ ತಾಳಿ ಕಟ್ಟುತ್ತಿದ್ದಾಗ ನಟಿ ಕೀರ್ತಿ ಸುರೇಶ್ ಕಣ್ಣೀರು ಹಾಕಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ನಟಿ ಕೀರ್ತಿ ಸುರೇಶ್ ಸೋಷಿಯಲ್ ಮೀಡಿಯಾದಲ್ಲಿ ಬಾಲ್ಯದ ಗೆಳೆಯನ ಜೊತೆಗೆ ನಿಂತುಕೊಂಡಿರೋ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದರು. ಆ ಫೋಟೋ ಕೂಡ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.