ಕೆಲಸದ ಒತ್ತಡದಿಂದ ನೇಣು ಬಿಗಿದುಕೊಂಡು ಇಂಜನಿಯರ್ ಆತ್ಮಹತ್ಯೆ!

Date:

ಕೆಲಸದ ಒತ್ತಡದಿಂದ ನೇಣು ಬಿಗಿದುಕೊಂಡು ಇಂಜನಿಯರ್ ಆತ್ಮಹತ್ಯೆ!

ಮಂಡ್ಯ: ಕೆಲಸದ ಒತ್ತಡದಿಂದ ನೇಣು ಬಿಗಿದುಕೊಂಡು ಇಂಜನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ನಡೆದಿದೆ. ಜ್ಞಾನೇಶ್(30) ಮೃತ ಇಂಜಿನಿಯರ್. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹೆಮ್ಮತ್ತಿ ಗ್ರಾಮದ ನಿವಾಸಿಯಾದ ಈತ ಕಳೆದ ಹಲವು ವರ್ಷಗಳಿಂದ ಕೆಸ್ತೂರು ಗ್ರಾಮದಲ್ಲಿ ವಾಸವಾಗಿದ್ದ.
ಮೃತ ಜ್ಞಾನೇಶ್ ಶಿಂಷಾ ಏತ ನೀರಾವರಿ ಯೋಜನೆಯನಲ್ಲಿ ಕಳೆದ 5 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ. ಆತ್ಮಹತ್ಯೆಗೂ ಮುನ್ನ ತನ್ನ ವಾಟ್ಸಾಪ್‌ ಸ್ಟೇಟಸ್‌ನಲ್ಲಿ ʼWork Pressureʼ ಎಂದು ಹಾಕಿಕೊಂಡಿದ್ದ. ಈ ಹಿನ್ನೆಲೆ ಕೆಲಸದ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನೆ ಸಂಬಂಧ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು?

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು? ನಮ್ಮ...

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...