ಸತತ ಆರು ತಿಂಗಳ ನಂತರ ಬಿಡುಗಡೆಗೊಂಡ ಪವಿತ್ರಾ ಗೌಡ
ಬೆಂಗಳೂರು: ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಹೈಕೋರ್ಟ್ ಜಾಮೀನು ನೀಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾ ಗೌಡ ಎ1 ಆಗಿದ್ದು, ಅವರಿಗೆ ಜಾಮೀನು ನೀಡಲಾಗಿದೆ. ಜೂನ್ ತಿಂಗಳಲ್ಲಿ ಪವಿತ್ರಾ ಗೌಡ ಅರೆಸ್ಟ್ ಆಗಿದ್ದರು. ಬಳಿಕ ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಿಲಾಗಿತ್ತು. ಹಲವು ತಿಂಗಳ ಬಳಿಕ ಅವರಿಗೆ ಜಾಮೀನು ಸಿಕ್ಕಿದೆ.
ಇದೀಗ ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ನಗು ನಗುತ್ತಲೆ ಹೊರ ಬಂದಿದ್ದಾರೆ. ಸೋಮವಾರ ಜಾಮೀನು ಪ್ರಕ್ರಿಯೆಗಳು ಎಲ್ಲಾ ಪೂರ್ಣಗೊಂಡ ಹಿನ್ನೆಲೆಯಲ್ಲಿಬೆಳಗ್ಗೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಪವಿತ್ರಾ ಗೌಡ ಜೊತೆ 14ನೇ ಆರೋಪಿ ಪ್ರದೂಶ್ ಬಿಡುಗಡೆಯಾಗಿದ್ದಾನೆ. ಎಲ್ಲಾ ಆರೋಪಿಗಳು ತಲಾ 1 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಇಷ್ಟೇ ಮೊತ್ತಕ್ಕೆ ಇಬ್ಬರ ಭದ್ರತೆ ನೀಡಬೇಕು ಸೇರಿದಂತೆ ಹಲವು ಷರತ್ತುಗಳನ್ನು ಕೋರ್ಟ್ ವಿಧಿಸಿದೆ.