ಟ್ರಕ್, ಇನೋವಾ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ವರು ಆರೋಪಿಗಳು ಅರೆಸ್ಟ್.!
ಬೆಂಗಳೂರು: ಯಲಹಂಕ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಟ್ರಕ್, ಇನೋವಾ ಕಾರಿನಲ್ಲಿ ಗಾಂಜಾ ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ನಿಟ್ಟೆ ಮೀನಾಕ್ಷಿ ಕಾಲೇಜು ಕಡೆಗೆ ಹೋಗುವ ರಸ್ತೆಯಲ್ಲಿ ಗಾಂಜಾ ಇದ್ದ ಟ್ರಕ್ ನಿಲ್ಲಿಸಿಕೊಂಡು ನಿಂತಿದ್ದ ಆರೋಪಿಗಳನ್ನು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಿದ್ದಾರೆ. ಬಂಧಿತರಿಂದ 74 ಲಕ್ಷ ಮೌಲ್ಯದ 93 ಕೆಜಿ ಸೇರಿ 1 ಟ್ರಕ್, ಇನ್ನೋವಾ ಕಾರು, 4 ಮೊಬೈಲ್ ಸೀಜ್ ಮಾಡಲಾಗಿದೆ. ನ್ಯೂಇಯರ್ ಗೆ ಹೆಚ್ಚು ಬೆಲೆಗೆ ಗಾಂಜಾ ಮಾರಾಟ ಮಾಡಲು ಪ್ಲಾನ್ ಮಾಡಿದ್ದರು ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.