ಲೋಕಸಭೆಯಲ್ಲಿ ‘ಒಂದು ದೇಶ, ಒಂದು ಚುನಾವಣೆ’ ಮಸೂದೆ ಮಂಡನೆ

Date:

ಲೋಕಸಭೆಯಲ್ಲಿ ‘ಒಂದು ದೇಶ, ಒಂದು ಚುನಾವಣೆ’ ಮಸೂದೆ ಮಂಡನೆ

ನವದೆಹಲಿ: ಏಕಕಾಲದಲ್ಲಿ ಲೋಕಸಭೆ ಹಾಗೂ ವಿಧಾನಸಭೆಗಳಿಗೆ ಚುನಾವಣೆ ನಡೆಸುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ‘ಒಂದು ದೇಶ ಒಂದು ಚುನಾವಣೆ’ ಮಸೂದೆಯನ್ನು ಲೋಕಸಭೆಯಲ್ಲಿ ಇಂದು ಮಂಡನೆ ಮಾಡಲಾಗಿದೆ. ಒಂದು ದೇಶ, ಒಂದು ಚುನಾವಣೆಗಾಗಿ ಸಂವಿಧಾನದ 129ನೇ ತಿದ್ದುಪಡಿ ಮಸೂದೆ 2024 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಡಿಸಿದರು. ಆದರೆ, ವಿರೋಧ ಪಕ್ಷಗಳು ಇದನ್ನು ತೀವ್ರವಾಗಿ ಕಂಡಿಸಿವೆ.
ಸ್ಪೀಕರ್ ಓಂ ಬಿರ್ಲಾ ಅವರು ವಿಧೇಯಕವನ್ನು ಧ್ವನಿಮತಕ್ಕೆ ಹಾಕಿದರು. ಇದಾದ ಬಳಿಕ ನಿಖರ ಫಲಿತಾಂಶಕ್ಕಾಗಿ ಎಲೆಕ್ಟ್ರಾನಿಕ್ ಮತದಾನ ನಡೆಸಲಾಯಿತು. ಈ ವೇಳೆ ವಿಧೇಯಕದ ಪರವಾಗಿ 269, ವಿರುದ್ಧವಾಗಿ 198 ಮತಗಳು ಬಿದ್ದಿವೆ ಎಂದು ಸ್ಪೀಕರ್ ಪ್ರಕಟಿಸಿದರು.
ಲೋಕಸಭೆಯಲ್ಲಿ ವಿಧೇಯಕವು ಅಂಗೀಕಾರ ಪಡೆದುಕೊಂಡರೂ, ಹಲವು ವಿಚಾರಗಳ ಕುರಿತು ಆಡಳಿತ ಮತ್ತು ವಿಪಕ್ಷಗಳ ನಡುವೆ ವಿರೋಧಾಭಾಸ ಉಂಟಾಯಿತು. ಪ್ರಸ್ತಾವಿತ ವಿಧೇಯಕವನ್ನು ವಿಸ್ತೃತ ಚರ್ಚೆಗಾಗಿ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಗೆ ವಹಿಸಬೇಕು ಎಂದು ವಿಪಕ್ಷಗಳು ಬೇಡಿಕೆ ಇಟ್ಟವು. ಇದಕ್ಕೆ ಕೇಂದ್ರವು ಒಪ್ಪಿಗೆ ಸೂಚಿಸಿತು. ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ‘ಒಂದು ರಾಷ್ಟ್ರ, ಒಂದು ಚುನಾವಣೆ’ಯ ಸಂವಿಧಾನದ 129ನೇ ತಿದ್ದುಪಡಿ ವಿಧೇಯಕವನ್ನು ಜೆಪಿಸಿಗೆ ನೀಡುವುದಾಗಿ ಸದನಕ್ಕೆ ತಿಳಿಸಿದರು.

Share post:

Subscribe

spot_imgspot_img

Popular

More like this
Related

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆ

ಜಲಮಂಡಳಿಯಿಂದ ಯುಗಾದಿ ಉಡುಗೊರೆ: ನೀರಿನ ಬಿಲ್ ಬಾಕಿಗೆ ಬಡ್ಡಿ ಮನ್ನಾ ಯೋಜನೆಬೆಂಗಳೂರು,...

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ರಂಜಾನ್ ಹಬ್ಬದ ಶುಭಾಶಯಗಳುಬೆಂಗಳೂರು, ಮಾರ್ಚ್ 21:ರಾಜ್ಯದ ಮುಸ್ಲಿಂ ಬಾಂಧವರಿಗೆ...

ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ? ಆರೋಗ್ಯಕ್ಕೆ ಅದ್ಭುತ ಲಾಭಗಳು

ಪ್ರತಿದಿನ ದಾಳಿಂಬೆ ತಿಂದರೆ ಏನಾಗುತ್ತದೆ? ಆರೋಗ್ಯಕ್ಕೆ ಅದ್ಭುತ ಲಾಭಗಳುಹಣ್ಣುಗಳು ನಮ್ಮ ಆರೋಗ್ಯಕ್ಕೆ...

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ!

ರಾಯಚೂರು: ಜಗದ್ಗುರು ಶಿವಾನಂದ ಮಠದ ಪೀಠಾಧಿಪತಿ ಆತ್ಮಹತ್ಯೆ! ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ...