ಪ್ರಾಚೀನ ಭಾಷೆಗಳಿಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಲು ಸರ್ಕಾರ ನಿರಂತರವಾಗಿ ಶ್ರಮಿಸಿದೆ: ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ
ನವದೆಹಲಿ: ಪ್ರಾಚೀನ ಭಾಷೆಗಳಿಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಲು ಸರ್ಕಾರ ನಿರಂತರವಾಗಿ ಶ್ರಮಿಸಿದೆ ಎಂದು ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ಪ್ರಾಚೀನ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಶಾಸ್ತ್ರೀಯ ಭಾಷೆಗಳಿಗೆ ವಿಶೇಷ ಗಮನ ನೀಡಲಾಗಿದೆ. ಪ್ರಾಚೀನ ಭಾಷೆಗಳಿಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಲು ಸರ್ಕಾರ ನಿರಂತರವಾಗಿ ಶ್ರಮಿಸಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಅಕ್ಟೋಬರ್ 2024ರಲ್ಲಿ ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ ಮತ್ತು ಬೆಂಗಾಲಿಗಳನ್ನು ಶಾಸ್ತ್ರೀಯ ಭಾಷೆಗಳಾಗಿ ಹೆಸರಿಸಲು ಅನುಮೋದಿಸಿತು. ಅದರ ಒಟ್ಟು ಸಂಖ್ಯೆ 11ಕ್ಕೆ ಏರಿದೆ ಎಂದು ಮಾಹಿತಿ ನೀಡಿದ್ದಾರೆ.
ಇನ್ನೂ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತೀಯ ಭಾಷೆಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದ್ದು, ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗಲಾಗುತ್ತಿದೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ಹೇಳಿದರು. 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಶ್ಮೀರಿ, ಡೋಗ್ರಿ, ಉರ್ದು, ಹಿಂದಿ ಮತ್ತು ಇಂಗ್ಲಿಷ್ ಅನ್ನು ಅಧಿಕೃತ ಭಾಷೆಗಳಾಗಿ ಗುರುತಿಸಲಾಗಿದೆ. ಈ ನಿರ್ಧಾರವು ಸ್ಥಳೀಯ ಸಮುದಾಯಗಳ ಭಾವನೆ ಮತ್ತು ಸಬಲೀಕರಣಕ್ಕೆ ಬಹಳ ಮುಖ್ಯವಾಗಿದೆ ಎಂದಿದ್ದಾರೆ.