ಲಕ್ಷ್ಮಿ ಹೆಬ್ಬಾಳ್ಕಕರ್ ಗೆ ಅಶ್ಲೀಲ ಪದ ಬಳಕೆ: ಸಿಟಿ ರವಿ ವಿರುದ್ಧ ಸಭಾಪತಿಗೆ ದೂರು ಸಚಿವೆ
ಬೆಳಗಾವಿ: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಕೆ ಮಾಡಿದ ಆರೋಪ ಕೇಳಿಬಂದಿದೆ. ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಸಿಟಿ ರವಿ ಅಶ್ಲೀಲ ಪದ ಬಳಸಿದ್ದಾರೆ ಎಂದು ಆಕ್ರೋಶ ಕಾಂಗ್ರೆಸ್ ಸದಸ್ಯರೆಲ್ಲರು ಕಿಡಿ ಕಾರಿದ್ರು. ಸಹ ಸದಸ್ಯರನ್ನು ಕರೆತಂದು ಲಕ್ಷ್ಮಿ ಹೆಬ್ಬಾಳ್ಕರ್ ಕೂಡ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ ಇದೇ ವಿಚಾರವಾಗಿ ಸಭಾಪತಿ ಹೊರಟ್ಟಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದೂರು ನೀಡಿದ್ದಾರೆ.
ಸಭಾಪತಿ ಹೊರಟ್ಟಿ ಚೇಂಬರ್ನಲ್ಲಿ ಜಮಾಯಿಸಿದ ಕಾಂಗ್ರೆಸ್ ಸದಸ್ಯರು, ಸದನದಲ್ಲಿ ಕೀಳುಮಟ್ಟದ ಹಾಗೂ ತೀರ ಅವಮಾನಕರ ಪದ ಬಳಕೆ ಮಾಡಿದ್ದಾರೆ. ಸಭಾಪತಿ ಎದುರು ನೇರವಾಗಿ ತಮ್ಮ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದಾರೆ ಎಂದು ಹೆಬ್ಬಾಳ್ಕರ್ ದೂರು ನೀಡಿದ್ರು. ಸಚಿವರ ಮಾತು ಕೇಳಿ ದಂಗಾದ ಸಭಾಪತಿ ಹೊರಟ್ಟಿ ತಕ್ಷಣ ಪರಿಷತ್ ಕಾರ್ಯದರ್ಶಿಯನ್ನ ಕರೆಸಿ ಮಾತನಾಡಿದ್ದಾರೆ. ಈ ವೇಳೆ ಸಭಾಪತಿ ಕಚೇರಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಣ್ಣೀರು ಹಾಕಿದ್ದಾರೆ ಎನ್ನಲಾಗಿದೆ.