ಶಿವಣ್ಣನ ಆರೋಗ್ಯಕ್ಕಾಗಿ ದೇವರ ಮೊರೆ ಹೋದ ಫ್ಯಾನ್ಸ್!
ಬೆಂಗಳೂರು: ಶಿವರಾಜ್ ಕುಮಾರ್ ಅವರು ಅಮೆರಿಕಕ್ಕೆ ಚಿಕಿತ್ಸೆಗೆಂದು ತೆರಳಿದ್ದಾರೆ. ಹೀಗಾಗಿ ಆರಮಾಗಿ ಮತ್ತೆ ನಾಡಿಗೆ ಹಿಂದಿರುಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸಿದ್ದಾರೆ. ನಾಗಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಅರ್ಚನೆ ನಡೆದಿದ್ದು, ರಾಜ್ಯದ ನಾನಾ ಭಾಗಗಳಲ್ಲಿ ಶಿವಣ್ಣನ ಹಾರೈಕೆಗಾಗಿ ಅಭಿಮಾನಿಗಳಿಂದ ವಿಶೇಷ ಪೂಜೆ ನಡೆದಿದೆ. ಮುಡಿಕೊಟ್ಟು, ಉರುಳು ಸೇವೆ ಮಾಡಿದ ಶಿವಣ್ಣ ಫ್ಯಾನ್ಸ್ ಶಿವಣ್ಣ ಬೇಗ ಗುಣಮುಖರಾಗಿ ಬನ್ನಿ ಎಂದು ಹಾರೈಸಿದ್ದಾರೆ.
ಹೌದು ಸಿಲಿಕಾನ್ ಸಿಟಿಯ ಮಾಗಡಿ ರೋಡ್ನಲ್ಲಿನ ವಿರೇಶ್ ಥಿಯೇಟರ್ ಬಳಿ ಇರುವ ನಾಗಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶಿವಣ್ಣನ ಆರೋಗ್ಯ ಚೇತರಿಕೆಗಾಗಿ ಅಭಿಮಾನಿಗಳು ವಿಶೇಷ ಪೂಜೆ ನೆರವೇರಿಸಿದ್ದಾರೆ.
ಡಾ.ಶಿವರಾಜ್ಕುಮಾರ್ ಅವರು ಚಿಕಿತ್ಸೆಗೆಂದು ಅಮೆರಿಕಕ್ಕೆ ತೆರಳಿದ್ದು ಇಂದು ಶಸ್ತ್ರಚಿಕಿತ್ಸೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೆಂಗಳೂರಿನಲ್ಲಿ ದೇವರ ಮೊರೆ ಹೋಗಿದ್ದು ಸರ್ಜರಿ ಯಶಸ್ವಿಯಾಗಿ, ಆರೋಗ್ಯವಾಗಿ ಶಿವಣ್ಣ ತವರಿಗೆ ಮರಳಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.