ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: 2 ಗುಂಪಿನ ನಡುವೆ ಮಾರಾಮಾರಿ
ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಾಜಪೇಯಿ ಜನ್ಮದಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಬಿಜೆಪಿ ಶಾಸಕ ಮುನಿರತ್ನ ಕಾರಿನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ.
ಹೌದು ಲಕ್ಷ್ಮೀ ದೇವಿ ನಗರ ವಾರ್ಡ್ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚಾರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಾಸಕ ಮುನಿರತ್ನ ಹೋಗುತ್ತಿದ್ದ ವೇಳೆ ಕಂಠೀರವ ಸ್ಟುಡಿಯೋ ಬಳಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ.
ಈ ವೇಳೆ ಶಾಸಕ ಮುನಿರತ್ನ ಅವರು ರಾಜ್ ಕುಮಾರ್ ಸಮಾಧಿ ಬಳಿ ಕುರಿತು ಪ್ರತಿಭಟನೆ ನಡೆಸಿದ್ದಾರೆ. ನಂತರ ಅವರು ಅಲ್ಲಿಂದ ತೆರಳಿದ್ದಾರೆ. ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮುನಿರತ್ನ ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು 2ರಿಂದ 3 ಕಾರು ಜಖಂ ಆಗಿ ಹಲವರಿಗೆ ಗಾಯ ಎಂದು ಹೇಳಲಾಗುತ್ತಿದೆ.