ಮನಮೋಹನ್ ಸಿಂಗ್ ನಿಧನ: ಅಂತಿಮ ನಮನ ಸಲ್ಲಿಸಿ ಪ್ರಧಾನಿ ಮೋದಿ
ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ 92 ನೇ ವಯಸ್ಸಿನಲ್ಲಿ ಗುರುವಾರ ನಿಧನರಾದರು. 2004ರಿಂದ 2014ರವರೆಗೆ 10 ವರ್ಷಗಳ ಕಾಲ ದೇಶದ ಪ್ರಧಾನಿಯಾಗಿದ್ದರು. ಇಧೀಗ ದೆಹಲಿಯ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಂತಿಮ ನಮನ ಸಲ್ಲಿಸಿದ್ದಾರೆ. ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಅವರ ಕುಟುಂಬಕ್ಕೆ ಪ್ರಧಾನಿ ಸಂತಾಪ ಸೂಚಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ಮನಮೋಹನ್ ಸಿಂಗ್ ಅವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಮಾಜಿ ಪ್ರಧಾನಿ ನಿವಾಸದಲ್ಲಿ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಕೂಡ ಹಾಜರಿದ್ದರು.