No menu items!
3.9 C
Munich
Wednesday, September 23, 2026

ಚಿರತೆ ಪ್ರತ್ಯಕ್ಷ: ಮೈಸೂರಿನ ಇನ್ಫೋಸಿಸ್ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಂ!

Must read

ಚಿರತೆ ಪ್ರತ್ಯಕ್ಷ: ಮೈಸೂರಿನ ಇನ್ಫೋಸಿಸ್ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಂ!

ಮೈಸೂರು:- ಮೈಸೂರಿನ ಇನ್ಫೋಸಿಸ್ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಂ ನೀಡಲಾಗಿದೆ. ಇಲ್ಲಿನ ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ತನ್ನ ಉದ್ಯೋಗಿಗಳಿಗೆ ಮನೆಯಲ್ಲೇ ಕೆಲಸ ನೀಡಲಾಗಿದೆ.

ಇಂದು ಬೆಳಗ್ಗೆ ಕ್ಯಾಂಪಸ್‌ನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಚಿರತೆಯ ಚಲನವಲನ ಕ್ಯಾಂಪಸ್‌ನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕ್ಯಾಂಪಸ್‌ನಲ್ಲಿ ಚಿರತೆ ಓಡಾಟ ಹಿನ್ನೆಲೆ ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಇನ್ಫೋಸಿಸ್ ಹ್ಯೂಮನ್ ರಿಸೊರ್ಸ್ ವಿಭಾಗದಿಂದ ಮನೆಯಲ್ಲೇ ಕೆಲಸ ನಿರ್ವಹಿಸುವಂತೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ.

ಸದ್ಯ ಯಾವುದೇ ಸಿಬ್ಬಂದಿಯನ್ನು ಕ್ಯಾಂಪಸ್ ಒಳಗಡೆ ಬಿಡಲಾಗುವುದಿಲ್ಲ ಎಂದು ಸಂಸ್ಥೆಯಿಂದ ಆದೇಶ ಹೊರಡಿಸಲಾಗಿದೆ.

- Advertisement -spot_img

More articles

- Advertisement -spot_img

Latest article