ಕೌಟುಂಬಿಕ ಕಲಹದಿಂದ ಬೇಸತ್ತ ಇಂಜಿನಿಯರ್ ನದಿಗೆ ಹಾರಿ ಆತ್ಮಹತ್ಯೆ!
ಹಾಸನ: ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ನಂತರ ಹೆಂಡತಿ ಕಾಟಕ್ಕೆ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇತ್ತೀಚೆಗೆ ಬೆಂಗಳೂರಿನಲ್ಲಿ ವರದಿಯಾಗಿತ್ತು. ಇದೀಗ ಕೌಟುಂಬಿಕ ಕಲಹ ಹಿನ್ನಲೆ ಇಂಜಿನಿಯರ್ ಓರ್ವ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಪ್ರಮೋದ್ (35) ಆತ್ಮಹತ್ಯೆಗೆ ಶರಣಾಗಿದ್ದು,
ಪತ್ನಿ ಕಾಟದಿಂದ ಬೇಸತ್ತು ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಬೆಂಗಳೂರಿನ ಬೆಂಜ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರಮೋದ್ ಡಿಸೆಂಬರ್ 29 ರಂದು ಮನೆಯಿಂದ ಹೊರಗೆ ಹೋಗಿದ್ದರು. ಆ ಬಳಿಕ ನಾಪತ್ತೆಯಾಗಿದ್ದರು. ಗೊರೂರು ಸಮೀಪ ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.