ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಲು ಸಿದ್ದರಾಮಯ್ಯ ನಡುಗುತ್ತಿದ್ದಾರೆ: ಆರ್ ಅಶೋಕ್ ವ್ಯಂಗ್ಯ
ಬೆಂಗಳೂರು: ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಲು ಸಿದ್ದರಾಮಯ್ಯ ನಡುಗುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಂದು ಬಿಜೆಪಿ ಸರ್ಕಾರ ಇದ್ದಾಗ ಈಶ್ವರಪ್ಪನವರನ್ನು ಉದ್ದೇಶಿಸಿ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದರು. ಒಬ್ಬ ವ್ಯಕ್ತಿ ಆತ್ಮಹತ್ಯೆ ನಿರ್ಧಾರಕ್ಕೆ ಬರಬೇಕು ಎಂದರೆ ಎಷ್ಟು ಕಷ್ಟಪಟ್ಟಿರಬಹುದು, ಎಷ್ಟು ಮಂದಿ ಬೀದಿಗೆ ಬಂದಿರಬಹುದು ಎಂದು ಪ್ರಿಯಾಂಕ್ ಪ್ರಶ್ನಿಸಿದ್ದರು.
ಅದೇ ಪ್ರಿಯಾಂಕ್ ಖರ್ಗೆ ಈಗ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ನೀಡಲಿ ಎಂದು ಅಶೋಕ್ ಕಿಡಿಕಾರಿದ್ದಾರೆ. ಎಐಸಿಸಿ ಅಧ್ಯಕ್ಷರ ಮಗ ಎಂದು ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಲು ಸಿದ್ದರಾಮಯ್ಯ ನಡುಗುತ್ತಿದ್ದಾರೆ. ನಾವು ಬಟ್ಟೆಹರಿದುಕೊಳ್ಳುವುದಕ್ಕಿಂತ ಮೊದಲು ಅವರ ಬಟ್ಟೆ ಹರಿದು ಹೋಗುತ್ತದೆ ಎಂದು ಅಶೋಕ್ ತಿರುಗೇಟು ನೀಡಿದ್ದಾರೆ.