No menu items!
18.8 C
Munich
Sunday, August 30, 2026

ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ DYSP!

Must read

ದೂರು ನೀಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ DYSP!

ತುಮಕೂರು: ಮಹಿಳೆ ಜೊತೆ ಪೊಲೀಸರೊಬ್ಬರು ಅಸಭ್ಯ ವರ್ತನೆ ತೋರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.ಹೌದು ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ್ ತವರು ಜಿಲ್ಲೆಯಲ್ಲೇ ಇಡೀ ಪೊಲೀಸ್ ಇಲಾಖೆಯೆ ತಲೆ ತಗ್ಗಿಸುವಂತ ಆರೋಪ ಕೇಳಿಬಂದಿದೆ. ಹೌದು ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ಮಧುಗಿರಿ ಉಪವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.
ಜಮೀನು ವ್ಯಾಜ್ಯದ ಬಗ್ಗೆ ಪಾವಗಡ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಸಂಬಂಧ ವಿಚಾರಿಸುವ ಸಲುವಾಗಿ ಮಹಿಳೆಯನ್ನು ಡಿವೈಎಸ್‌ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನು ಪುಸಲಾಯಿಸಿದ ರಾಮಚಂದ್ರಪ್ಪ ಆಕೆಯನ್ನು ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ಲೈಂಗಿಕ ಕ್ರಿಯೆ ಶುರುಮಾಡಿದ್ದಾರೆ. ಇನ್ನು ಮಹಿಳೆ ಜೊತೆ ಡಿವೈಎಸ್‌ಪಿ ರಾಮಚಂದ್ರಪ್ಪ ಬಲವಂತವಾಗಿ ನಡೆದುಕೊಳ್ಳುತ್ತಿದ್ದುದ್ದನ್ನು ಸೆರೆ ಹಿಡಿದ ವ್ಯಕ್ತಿಯೊಬ್ಬರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.

- Advertisement -spot_img

More articles

- Advertisement -spot_img

Latest article