ಲಾಡ್ಜ್ ನಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆಗೆ ಶರಣು.!
ಗದಗ: ಬೀದರ್ನಲ್ಲಿ ಯುವ ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಇದೀಗ ನೇಣು ಬಿಗಿದುಕೊಂಡು ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗನ ಪಲ್ಲವಿ ಲಾಡ್ಜ್ನಲ್ಲಿ ನಡೆದಿದೆ. ಶಂಕರಗೌಡ ಪಾಟೀಲ್ (54) ಆತ್ಮಹತ್ಯೆ ಮಾಡಿಕೊಂಡಿರುವ ಇಂಜಿನಿಯರ್ ಆಗಿದ್ದು, ಗದಗ ನಗರದ ನಿವಾಸಿಯಾಗಿರುವ ಶಂಕರಗೌಡ ಪಾಟೀಲ್ ನಗರದ ಪಲ್ಲವಿ ಲಾಡ್ಜ್ನ ರೂಮ್ ನಂಬರ್ 513ರಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಬೆಟಗೇರಿ ಬಡಾವಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆಗೆ ಕಾರಣ ಸದ್ಯಕ್ಕೆ ತಿಳಿದು ಬಂದಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಸದ್ಯ ಶಂಕರಗೌಡ ಪಾಟೀಲ್ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿದ್ದು, ಈ ಸಾವು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.