ಶಿವಮೊಗ್ಗದಲ್ಲೂ HMP ವೈರಸ್ ಪತ್ತೆ! ಆರು ಮಕ್ಕಳಲ್ಲಿ ಸೋಂಕು
ಶಿವಮೊಗ್ಗ: ಕೋವಿಡ್ ವೈರಸ್ ಕಾಣಿಸಿಕೊಂಡ ಐದು ವರ್ಷದ ಬಳಿಕ ಮತ್ತೆ ದೇಶದಲ್ಲಿ ವೈರಸ್ ಹಾವಳಿ ಶುರುವಾಗಿದೆ. ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ ಏಕಾಏಕಿ ಚೀನಾದಲ್ಲಿ ಹರಡುತ್ತಿದ್ದು, ಈ ನಡುವೆ ಬೆಂಗಳೂರಿನಲ್ಲಿ ಎರಡು ಮೊದಲ ಕೇಸ್ ಪತ್ತೆಯಾದ ಬಳಿಕ ಇದೀಗ ಮಲೆನಾಡು ಶಿವಮೊಗ್ಗದಲ್ಲೂ ಎಚ್‌ಎಂಪಿವಿ ವೈರಸ್ ಪತ್ತೆಯಾಗಿದೆ.
1 ವರ್ಷ, 2 ವರ್ಷ ವಯಸ್ಸಿನ ಆರು ಮಕ್ಕಳಲ್ಲಿ ವೈರಸ್ ಕಾಣಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿ, ಶಿವಮೊಗ್ಗ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದೆ.
ಕೊರೋನಾ ಶಂಕೆಯಲ್ಲಿ ಸ್ವಾಬ್ ತೆಗೆದು ಟೆಸ್ಟ್ ಮಾಡಿಸಲಾಗಿತ್ತು. ನಂತರ ಲ್ಯಾಬ್ ವರದಿಯಲ್ಲಿ ಹ್ಯೂಮನ್ ಮೆಟಾನ್ಯುಮೊವೈರಸ್ ಎನ್ನುವುದು ದೃಢಪಟ್ಟಿತ್ತು. ಉಸಿರಾಟದ ಸೋಂಕಿನ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಿ ಮಕ್ಕಳನ್ನು ಗುಣಪಡಿಸಲಾಗಿದೆ ಎಂದು ಡಾ. ಧನಂಜಯ್ ಸರ್ಜಿ ಮಾಹಿತಿ ನೀಡಿದ್ದಾರ. ಅಕ್ಟೋಬರ್ ನವೆಂಬರ್ ತಿಂಗಳಿನಿಂದಲೇ ಈ ಸೋಂಕು ಆರಂಭಗೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ. HMP ವೈರಸ್ ಪತ್ತೆ! ಆರು ಮಕ್ಕಳಲ್ಲಿ ಸೋಂಕು
ಶಿವಮೊಗ್ಗ: ಕೋವಿಡ್ ವೈರಸ್ ಕಾಣಿಸಿಕೊಂಡ ಐದು ವರ್ಷದ ಬಳಿಕ ಮತ್ತೆ ದೇಶದಲ್ಲಿ ವೈರಸ್ ಹಾವಳಿ ಶುರುವಾಗಿದೆ. ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ ಏಕಾಏಕಿ ಚೀನಾದಲ್ಲಿ ಹರಡುತ್ತಿದ್ದು, ಈ ನಡುವೆ ಬೆಂಗಳೂರಿನಲ್ಲಿ ಎರಡು ಮೊದಲ ಕೇಸ್ ಪತ್ತೆಯಾದ ಬಳಿಕ ಇದೀಗ ಮಲೆನಾಡು ಶಿವಮೊಗ್ಗದಲ್ಲೂ ಎಚ್‌ಎಂಪಿವಿ ವೈರಸ್ ಪತ್ತೆಯಾಗಿದೆ.
1 ವರ್ಷ, 2 ವರ್ಷ ವಯಸ್ಸಿನ ಆರು ಮಕ್ಕಳಲ್ಲಿ ವೈರಸ್ ಕಾಣಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿ, ಶಿವಮೊಗ್ಗ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದೆ.
ಕೊರೋನಾ ಶಂಕೆಯಲ್ಲಿ ಸ್ವಾಬ್ ತೆಗೆದು ಟೆಸ್ಟ್ ಮಾಡಿಸಲಾಗಿತ್ತು. ನಂತರ ಲ್ಯಾಬ್ ವರದಿಯಲ್ಲಿ ಹ್ಯೂಮನ್ ಮೆಟಾನ್ಯುಮೊವೈರಸ್ ಎನ್ನುವುದು ದೃಢಪಟ್ಟಿತ್ತು. ಉಸಿರಾಟದ ಸೋಂಕಿನ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಿ ಮಕ್ಕಳನ್ನು ಗುಣಪಡಿಸಲಾಗಿದೆ ಎಂದು ಡಾ. ಧನಂಜಯ್ ಸರ್ಜಿ ಮಾಹಿತಿ ನೀಡಿದ್ದಾರ. ಅಕ್ಟೋಬರ್ ನವೆಂಬರ್ ತಿಂಗಳಿನಿಂದಲೇ ಈ ಸೋಂಕು ಆರಂಭಗೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ.