ಚಳಿಗಾಲದಲ್ಲಿ ಮೆಂತ್ಯ ಸೊಪ್ಪು ತಿನ್ನೋದರಿಂದ ಆರೋಗ್ಯ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ..?

Date:

ಚಳಿಗಾಲದಲ್ಲಿ ಮೆಂತ್ಯ ಸೊಪ್ಪು ತಿನ್ನೋದರಿಂದ ಆರೋಗ್ಯ ಎಷ್ಟೆಲ್ಲಾ ಲಾಭಗಳಿವೆ ಗೊತ್ತಾ..?

ದೇಹದ ಆರೋಗ್ಯ ಕಾಪಾಡಿಕೊಳ್ಳಲು ಹಣ್ಣು, ತರಕಾರಿಗಳು ಹಾಗೂ ಸೊಪ್ಪುಗಳ ಸೇವನೆ ಬಹು ಮುಖ್ಯವಾಗಿದ್ದು ಆಹಾರದಲ್ಲಿ ಹಸಿರು ಸೊಪ್ಪು ಮತ್ತು ತರಕಾರಿಗಳನ್ನು ಬಳಸಿಕೊಂಡರೆ ಆರೋಗ್ಯದ ಸಮಸ್ಯೆಗಳನ್ನು ನಾವು ಅರ್ಧಭಾಗದಷ್ಟು ಪರಿಹರಿಸಬಹು. ತರಕಾರಿ, ಸೊಪ್ಪುಗಳ ಮಹತ್ವವನ್ನೇ ಜನರು ಮರೆತು ಹೋಗುತ್ತಿದ್ದಾರೆ. ಪ್ರತೀ ಕಾಯಿಲೆ, ಸಮಸ್ಯೆಗಳಿಗೂ ವೈದ್ಯರ ಮೊರೆ ಹೋಗುವುದು ಸಾಮಾನ್ಯವಾಗಿ ಹೋಗಿದೆ. ಚಳಿಗಾಲದಲ್ಲಿ ಮೆಂತ್ಯ ಸೊಪ್ಪನ್ನು ಸೇವನೆ ಮಾಡೋದ್ರಿಂದ ಏನೆಲ್ಲ ಲಾಭವಿದೆ ಎಂಬುದನ್ನು ನಾವಿಂದು ಹೇಳ್ತೇವೆ.
ಮೆಂತ್ಯ ಸೊಪ್ಪು ಸೇವನೆ ಮಾಡೋದು ಹೇಗೆ ? : ಮೆಂತ್ಯ ಸೊಪ್ಪನ್ನು ನೀವು ನಾನಾ ರೀತಿಯಲ್ಲಿ ಸೇವನೆ ಮಾಡಬಹುದು. ಅನೇಕರು ಹಸಿ ಸೊಪ್ಪಿನ ಸಲಾಡ್ ಮಾಡಿ ಸೇವನೆ ಮಾಡ್ತಾರೆ. ಇದು ರುಚಿಯೂ ಹೌದು, ಆರೋಗ್ಯಕ್ಕೂ ಒಳ್ಳೆಯದು. ಇದಲ್ಲದೆ ನೀವು ಮೆಂತ್ಯ ಸೊಪ್ಪಿನ ಪಲ್ಯ, ಪರೋಠ ಮಾಡಿ ತಿನ್ನಬಹುದು.

ಮೆಂತ್ಯ ಸೊಪ್ಪು ಮಧುಮೇಹಿಗಳಿಗೆ ಒಳ್ಳೆಯ ಔಷಧಿ : ಮೆಂತ್ಯ ಸೊಪ್ಪಿನಲ್ಲಿ ಅಮೈನೋ ಆಮ್ಲ ಇರುತ್ತದೆ. ಇದು ಮಧುಮೇಹಿಗಳಿಗೆ ತುಂಬಾ ಪ್ರಯೋಜನಕಾರಿ. ಮಧುಮೇಹಿಗಳು ಮೆಂತ್ಯ ಸೊಪ್ಪಿನ ರಸ ಸೇವನೆ ಮಾಡಬಹುದು. ಇಲ್ಲವೆ ಅದರ ಎಲೆಗಳನ್ನು ಸೇವಿಸಬಹುದು. ಎಲೆ ತಿನ್ನುವುದು ಮಧುಮೇಹಿಗಳಿಗೆ ಹೆಚ್ಚು ಪ್ರಯೋಜನಕಾರಿಯಾಗಿದೆ.
ಜೀರ್ಣಕ್ರಿಯೆಗೆ ವರದಾನ ಮೆಂತ್ಯ ಸೊಪ್ಪು : ಮೆಂತ್ಯ ಸೊಪ್ಪಿನ ಸೇವನೆಯಿಂದ ಜೀರ್ಣಾಂಗ ಸುಧಾರಿಸುತ್ತದೆ. ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ. ಈ ಸೊಪ್ಪಿನಲ್ಲಿ ಉತ್ತಮ ಪ್ರಮಾಣದ ಫೈಬರ್ ಮತ್ತು ಆಂಟಿ ಆಕ್ಸಿಡಂಟ್ ಗುಣವಿದೆ. ಇದು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹೊಟ್ಟೆಯಲ್ಲಿ ಯಾವುದೇ ಸಮಸ್ಯೆ ಕಂಡು ಬಂದರೂ ನೀವು ಮೆಂತ್ಯ ಸೊಪ್ಪನ್ನು ಸೇವನೆ ಮಾಡಬಹುದು.
ತೂಕ ಇಳಿಕೆಗೆ ನೆರವಾಗುತ್ತೆ ಮೆಂತ್ಯ ಸೊಪ್ಪು : ತೂಕ ಏರಿಕೆ ಈಗಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆ. ಜನರು ಕೊಬ್ಬು ಕರಗಿಸಿಕೊಳ್ಳಲು ಡಯೆಟ್ ಮಾಡ್ತಾರೆ. ನೀವೂ ಡಯೆಟ್ ಮಾಡ್ತಿದ್ದರೆ ಅದ್ರಲ್ಲಿ ಮೆಂತ್ಯ ಸೊಪ್ಪನ್ನು ಸೇರಿಸಿಕೊಳ್ಳಿ. ಮೆಂತ್ಯ ಸೊಪ್ಪಿನಲ್ಲಿ ಫೈಬರ್ ಪ್ರಮಾಣ ಹೆಚ್ಚಿರುತ್ತದೆ. ಕ್ಯಾಲೊರಿ ಪ್ರಮಾಣ ಕಡಿಮೆ ಇರುತ್ತದೆ. ಹಾಗಾಗಿ ನೀವು ಮೆಂತ್ಯ ಸೊಪ್ಪಿನ ಸೇವನೆ ಮಾಡುವ ಮೂಲಕ ಬೊಜ್ಜನ್ನು ನಿಯಂತ್ರಣದಲ್ಲಿಡಬಹುದು.
ಮೂಳೆಗಳಿಗೆ ಬಲ ನೀಡುತ್ತೆ ಈ ಸೊಪ್ಪು : ಮೆಂತ್ಯ ಸೊಪ್ಪಿನಲ್ಲಿ ಪ್ರೋಟೀಮ್ ಅಂಶ ಹೆಚ್ಚಿದೆ. ಇದರ ಸೇವನೆಯಿಂದ ನಿಮ್ಮ ಮೂಳೆಗಳು ಬಲಪಡೆಯುತ್ತವೆ. ಚಳಿಗಾಲದಲ್ಲಿ ನೀವು ಮೆಂತ್ಯ ಸೊಪ್ಪನ್ನು ಸೇವನೆ ಮಾಡಿದ್ರೆ ಕೀಲು ನೋವಿನ ಸಮಸ್ಯೆಗೆ ಪರಿಹಾರ ಸಿಗುತ್ತದೆ.
ಕೂದಲ ಆರೋಗ್ಯಕ್ಕೆ ಮೆಂತ್ಯ ಸೊಪ್ಪು : ಬರೀ ಸೇವನೆಯಿಂದ ಮಾತ್ರವಲ್ಲ ಸೌಂದರ್ಯ ವರ್ಧಕವಾಗಿಯೂ ನೀವು ಇದನ್ನು ಬಳಸಬಹುದು. ಮೆಂತ್ಯ ಸೊಪ್ಪಿನ ಎಲೆಗಳನ್ನು ಅರೆದು ಕೂದಲಿಗೆ ಹಚ್ಚುವುದರಿಂದ ಕೂದಲು ಕಪ್ಪಾಗುತ್ತದೆ. ಅಷ್ಟೇ ಅಲ್ಲ ದಟ್ಟವಾದ ಮತ್ತು ಹೊಳೆಯುವ ಕೂದಲು ನಿಮ್ಮದಾಗುತ್ತದೆ. ಮೆಂತ್ಯ ಸೊಪ್ಪಿನಲ್ಲಿರುವ ಪೋಷಕಾಂಶ ನಿಮ್ಮ ಕೂದಲಿಗೆ ಒಳ್ಳೆಯದು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...