ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ಕೊಟ್ಟ ಲೋಕಾಯುಕ್ತ: ಬೆಂಗಳೂರು ಸೇರಿ ವಿವಿಧೆಡೆ ದಾಳಿ
ಬೆಂಗಳೂರು: ಕರ್ತವ್ಯ ಲೋಪ, ದುರಾಡಳಿತ, ಭ್ರಷ್ಟಾಚಾರದ ಕುರಿತು ಸಾರ್ವಜನಿಕರಿಂದ ದೂರು ಕೇಳಿಬರುತ್ತಿದ್ದ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ದಾಳಿ ನಡೆಸಿದ್ದಾರೆ. ಒಟ್ಟು 8 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಮನೆ ಮೆಲೆ ದಾಳಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆ ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ. ಎಸ್ಎನ್ ಉಮೇಶ್ ನಿವಾಸದ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ. ಅಲ್ಲದೆ, ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ರವೀಂದ್ರ ಮನೆ, ಬೆಳಗಾವಿ ಜಿಲ್ಲೆಯ ಖಾನಾಪುರದ ತಹಶೀಲ್ದಾರ್ ಪ್ರಕಾಶ್ ಶ್ರೀಧರ್, ತುಮಕೂರಿನ ನಿವೃತ್ತ ಆರ್ಟಿಒ ಅಧಿಕಾರಿ ಎಸ್.ರಾಜು ಮನೆ ಮೇಲೆಯೂ ದಾಳಿ ನಡೆದಿದೆ.