ಅಶ್ಲೀಲ ಹೇಳಿಕೆ ಕೇಸ್ :ಬಿಜೆಪಿ ಮುಖಂಡ ಸಿಟಿ ರವಿಗೆ ಮತ್ತೆ ಜೀವ ಬೆದರಿಕೆ!
ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಸಿ.ಟಿ ರವಿಯ ಅಶ್ಲೀಲ ಹೇಳಿಕೆ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದರ ಮಧ್ಯೆ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಜೀವ ಬೆದರಿಕೆ ವ್ಯಕ್ತವಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಮಾಡಿದ ಹೇಳಿಕೆಗೆ ಸಂಬಂಧಿಸಿದಂತೆ ಈ ಬೆದರಿಕೆ ಬಂದಿದೆ.
“ಲಕ್ಷ್ಮೀ ಹೆಬ್ಬಾಳ್ಕರ್ಗೆ ಕ್ಷಮೆ ಕೇಳದಿದ್ದರೆ ನಿಮ್ಮನ್ನು ಮತ್ತು ನಿಮ್ಮ ಪುತ್ರ ಸೂರ್ಯನನ್ನು ಹತ್ಯೆ ಮಾಡಲಾಗುತ್ತದೆ” ಎಂಬ ಬೆದರಿಕೆ ಪತ್ರ ಸಿಟಿ ರವಿಯವರ ಚಿಕ್ಕಮಗಳೂರಿನ ಬಸವನಹಳ್ಳಿ ನಿವಾಸಕ್ಕೆ ಬಂದಿದೆ. ಈ ಸಂಬಂಧ ಸಿಟಿ ರವಿ ಪಿಎ ಚೇತನ್ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಂಬಂಧ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.