ಕಾಂಗ್ರೆಸ್ ಸುಡುವ ಪಕ್ಷ, ದಲಿತರು ಹೋಗಬಾರದು ಅಂತ ಅಂಬೇಡ್ಕರ್ ಹೇಳಿದ್ದರು: ಜೋಶಿ!
ಹುಬ್ಬಳ್ಳಿ:- ಕಾಂಗ್ರೆಸ್ ಸುಡುವ ಪಕ್ಷ, ದಲಿತರು ಹೋಗಬಾರದು ಅಂತ ಅಂಬೇಡ್ಕರ್ ಹೇಳಿದ್ದರು ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಡಾ. ಬಿಆರ್ ಅಂಬೇಡ್ಕರ್ ಅವರನ್ನು ಅತ್ಯಂತ ಕೆಟ್ಟದಾಗಿ ನಡೆಸಿಕೊಂಡಿದೆ. ಜವಾಹರ್ ಲಾಲ್ ನೆಹರುರಿಂದ ರಾಜೀವ್ ಗಾಂಧಿವರೆಗೂ ಬಿಆರ್ ಅಂಬೇಡ್ಕರ್ ಅವರನ್ನು ಬಹಳ ಕೆಟ್ಟದಾಗಿ ನಡೆಸಿಕೊಂಡಿದ್ದಾರೆ. ಕೇಂದ್ರಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಬಿಆರ್ ಅಂಬೇಡ್ಕರ್ ಅವರಿಗೆ ಭಾರತ ರತ್ನ ಕೊಡಲಿಲ್ಲ. ಬಿಆರ್ ಅಂಬೇಡ್ಕರ್ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೆಹರು, “ರಾಜೀನಾಮೆಯಿಂದ ಏನೂ ನಷ್ಟವಿಲ್ಲ” ಎಂದರು.
ಕಾಂಗ್ರೆಸ್ ನಾಯಕರು ಬಿಆರ್ ಅಂಬೇಡ್ಕರ್ ಅವರನ್ನು ಎರಡು ಬಾರಿ ಲೋಕಸಭೆ ಚುನಾವಣೆಯಲ್ಲಿ ಸೋಲಿಸಿದರು. ಕಾಂಗ್ರೆಸ್ ಸುಡುವ ಪಕ್ಷ, ಅದರಲ್ಲಿ ದಲಿತರು ಹೋಗಬಾರದು ಅಂತ ಅಂಬೇಡ್ಕರ್ ಹೇಳಿದ್ದರು. ಕೆಲವು ದಲಿತ ಮುಖಂಡರಿಗೆ ಕಾಂಗ್ರೆಸ್ ಭ್ರಮೆ ಹುಟ್ಟಿಸಿದೆ. ದಲಿತರು ಕಾಂಗ್ರೆಸ್ನಿಂದ ದೂರ ಇದ್ದಷ್ಟು ಒಳ್ಳೆಯದು. ಕಾಂಗ್ರೆಸ್ನವರು ಮೀಸಲಾತಿ ವಿರೋಧ ಮಾಡಿದ್ದರು. ಕಾಂಗ್ರೆಸ್ ಸದಾ ದಲಿತ ಸಮುದಾಯವನ್ನು ಕತ್ತಲಲ್ಲಿ ಇಟ್ಟಿದೆ. ದಲಿತರು ಜಾಗೃತರಾಗಿರಬೇಕು ಎಂದು ಹೇಳಿದರು.