BJP ವೈಪಲ್ಯವನ್ನ ಮುಚ್ಚಿಕೊಳ್ಳಲು ಕಾಂಗ್ರೆಸ್ ಮೇಲೆ ಆರೋಪ ಮಾಡ್ತಿದ್ದಾರೆ: ರಣದೀಪ್ ಸಿಂಗ್ ಸುರ್ಜೇವಾಲ
ಬೆಂಗಳೂರು: BJP ವೈಪಲ್ಯವನ್ನ ಮುಚ್ಚಿಕೊಳ್ಳಲು ಕಾಂಗ್ರೆಸ್ ಮೇಲೆ ಆರೋಪ ಮಾಡ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿಯೇ ಕಿತ್ತಾಟ ಜೋರಾಗಿ ನಡೆಯುತ್ತಿದೆ. ಜೆಡಿಎಸ್ ಕೂಡ ಬಿಜೆಪಿಗೆ ಬೆಂಬಲ ನೀಡಿ ಕಾಂಗ್ರೆಸ್ ವಿರುದ್ಧ ಆರೋಪ ಮಾಡ್ತಿದೆ. ಅವರ ವೈಪಲ್ಯವನ್ನ ಮುಚ್ಚಿಕೊಳ್ಳಲು ಕಾಂಗ್ರೆಸ್ ಮೇಲೆ ಆರೋಪ ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ರಾಜ್ಯ ಕಾಂಗ್ರೆಸ್ ಕಿತ್ತಾಟ, ಪವರ್ ಶೇರಿಂಗ್ ವಿಚಾರಕ್ಕೆ ಪ್ರತಿಕ್ರಿಯಿಸಿ, ನೀವು ಒಗ್ಗಟ್ಟಿನ ಸರ್ಕಾರದ ಬಗ್ಗೆ ಪ್ರಶ್ನೆ ಕೇಳುತ್ತಿದ್ದೀರಿ, ನಮ್ಮದು ಒಗ್ಗಟ್ಟಿನ ಸರ್ಕಾರ. ನಮ್ಮಲ್ಲಿ ಒಗ್ಗಟ್ಟಿದೆ, ಏನೇ ಇದ್ದರೂ ಹೈಕಮಾಂಡ್ ಬಿಗ್‌ಬಾಸ್‌ನಿಂದ ಸಂದೇಶ ಬರುತ್ತದೆ. ಇದೆಲ್ಲಾ ಒಂದು ಗುಂಪಿನ ಮಾಧ್ಯಮಗಳ ಸೃಷ್ಟಿಯಷ್ಟೇ ಎಂದರು.
ಇನ್ನೂ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 58 ಸಾವಿರ ಕೋಟಿ ರೂಗಳ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ. ಇವುಗಳ ಲಾಭ ಜನತೆಗೆ ಸಿಗುತ್ತಿದೆ. ಇವು ದೇಶದ ದೊಡ್ಡ ಯೋಜನೆಗಳೆನಿಸಿವೆ. ಇವುಗಳ ಯಶಸ್ಸಿನಿಂದ ಬಿಜೆಪಿ ಹತಾಶೆಗೊಂಡಿದೆ. ಇದನ್ನು ಮರೆಮಾಚಲು ಕಾಂಗ್ರೆಸ್ನಲ್ಲಿ ಇಲ್ಲದ ಒಡಕನ್ನು ಸೃಷ್ಟಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ರಣದೀಪ್ ಸುರ್ಜೆವಾಲ ಆರೋಪಿಸಿದ್ದಾರೆ.