ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ! ಆಸ್ಪತ್ರೆಗೆ ದಾಖಲು – ನಜ್ಜುಗುಜ್ಜಾದ ಕಾರು
ಬೆಳಗಾವಿ: ನಾಯಿ ಅಡ್ಡ ಬಂದಿದ್ದನ್ನು ತಪ್ಪಿಸಲು ಹೋಗಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸಹೋದರ ಚನ್ನರಾಜ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ನಡೆದಿದೆ. ಅದೃಷ್ಟವಶಾತ್ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಸಹೋದರ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಬಚಾವ್ ಆಗಿದ್ದಾರೆ.
ಇಂದು ಬೆಳಗಿನ ಜಾವ ಐದು ಗಂಟೆ ಸುಮಾರಿಗೆ ಅಪಘಾತವಾಗಿದೆ. ನಾಯಿ ಅಡ್ಡ ಬಂದಿದ್ದನ್ನ ತಪ್ಪಿಸಲು ಹೋಗಿ ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ನುಜ್ಜಗುಜ್ಜಾಗಿದೆ. ಸಚಿವೆ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.