ನಾನು ಎರಡು ಬಾರಿ ಮುಖ್ಯಮಂತ್ರಿಯಾದಾಗ ಯಾರಿಗೂ ತೊಂದರೆ ಕೊಟ್ಟಿಲ್ಲ: ಹೆಚ್ ಡಿ ಕುಮಾರಸ್ವಾಮಿ
ಬೆಂಗಳೂರು: ನಾನು ಎರಡು ಬಾರಿ ಮುಖ್ಯಮಂತ್ರಿಯಾದಾಗ ಯಾರಿಗೂ ತೊಂದರೆ ಕೊಟ್ಟಿಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾನು ಎರಡು ಬಾರಿ ಮುಖ್ಯಮಂತ್ರಿಯಾದಾಗ ಯಾರಿಗೂ ತೊಂದರೆ ಕೊಟ್ಟಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ತಪ್ಪಾಗಿದೆ. ತಪ್ಪಿನ ವಿರುದ್ಧ ಹೋರಾಟ ಮಾಡುವ ನಿರ್ಧಾರ ನಿಮ್ಮ ಕೈಯಲ್ಲಿದೆ.
ನೀವೇನು ಭಿಕ್ಷುಕರಲ್ಲ ಕೆಲಸ ಮಾಡಿದ್ದೀರಿ ಕೆಲಸದ ಹಣ ಕೇಳುತ್ತಿದ್ದೀರಿ. ಕೆಲಸ ಮಾಡದೆ ಬಿಲ್ ತೆಗೆದುಕೊಂಡು ಹಣ ಹೊಡೆದ ಎಷ್ಟೋ ಜನ ಅಧಿಕಾರಿಗಳು, ಗುತ್ತಿಗೆದಾರರು ಇದ್ದಾರೆ. ನೀವು ಪ್ರಾಮಾಣಿಕವಾಗಿ ಕೆಲಸ ಮಾಡಿ, ಯಾಕೆ ದಯಾಮರಣ ಕೇಳುತ್ತೀರಿ ಎಂದು ಹೇಳಿದರು.
ಇನ್ನೂ ಸಚಿವ ಪ್ರಿಯಾಂಕ ಖರ್ಗೆ ಅವರೇ ನಿಮ್ಮ ಉಡಾಫೆ ಹೇಳಿಕೆಗಳನ್ನು ಬಿಡಿ. ಏನೇನು ಆಗಿದೆ ಅದನ್ನು ಸರಿಪಡಿಸಿಕೊಳ್ಳುವ ಕೆಲಸ ಮಾಡಿ. ಎಷ್ಟೋ ಗುತ್ತಿಗೆದಾರರು ಮನೆಯ ಹೆಣ್ಣುಮಕ್ಕಳ ಒಡವೆಗಳನ್ನು ಬ್ಯಾಂಕ್ಗಳಲ್ಲಿ ಅಡ ಇಟ್ಟು ಗುತ್ತಿಗೆ ಕೆಲಸ ಮಾಡಿಸಿದ್ದಾರೆ. ಸಮಸ್ಯೆಯನ್ನು ಯಾರ ಬಳಿ ಹೇಳಿಕೊಳ್ಳಲು ಆಗಲ್ಲ, ಬಿಡಲೂ ಆಗದೆ ಪರದಾಡುತ್ತಿದ್ದಾರೆ ಎಂದರು.