ಸೈಫ್ ಅಲಿ ಖಾನ್ ಪ್ರಕರಣ: ಶಂಕಿತ ಆರೋಪಿ ಅರೆಸ್ಟ್
ಮುಂಬೈ: ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲೆ ಚಾಕುವಿನ ದಾಳಿಯಾಗಿದ್ದು ಈಗ ದೇಶಾದ್ಯಂತ ಸುದ್ದಿಯಾಗಿದೆ. ಸದ್ಯ ಸೈಫ್ ಅಲಿಖಾನ್ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಘಟನೆ ಸಂಬಂಧ ಚಾಕು ಇರಿದಿದ್ದ ಆರೋಪಿಯನ್ನು ಮಹಾರಾಷ್ಟ್ರದ ಥಾಣೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಯನ್ನು ಮೊಹಮ್ಮದ್ ಸರಿಫುಲ್ ಇಸ್ಲಾಂ ಶೆಹಜಾದ್ ಎಂದು ಗುರುತಿಸಲಾಗಿದೆ. ಆತನನ್ನು ಸೈಫ್ ನಿವಾಸದಿಂದ ಸುಮಾರು 35 ಕಿಲೋಮೀಟರ್ ದೂರದಲ್ಲಿರುವ ಕಾಸರ್ವಾಡವಲಿಯ ಹಿರಾನಂದಾನಿ ಎಸ್ಟೇಟ್ ಬಳಿ ಬಂಧಿಸಲಾಗಿದೆ. ದುಷ್ಕರ್ಮಿ ಥಾಣೆಯ ಬಾರ್‌ನಲ್ಲಿ ಕೆಲಸ ಮಾಡುತ್ತಿದ್ದ. ಪೊಲೀಸರಿಗೆ ಸಿಕ್ಕಿಬೀಳುವ ಭಯದಿಂದ ಆತ ತನ್ನ ಹೆಸರನ್ನು ವಿಜಯ್ ದಾಸ್ ಎಂದು ಹೇಳಿಕೊಂಡಿದ್ದ ಎಂದು ಮೂಲಗಳು ತಿಳಿಸಿವೆ.