ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೋರ್ವ ವಿದ್ಯಾರ್ಥಿನಿ ಬಲಿ!
ತುಮಕೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿದೆ. ವಯಸ್ಸಿನ ಮಿತಿ ಇಲ್ಲದೇ ವಯಸ್ಕರೂ ಸಹ ಹೃದಯಾಘಾತಕ್ಕೆ ಒಳಗಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಮಕ್ಕಳು, ಯುವಕರು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ.
ಇದೀಗ ತರಗತಿ ಮುಗಿಸಿ ಮರಳುತ್ತಿದ್ದ ವಿದ್ಯಾರ್ಥಿನಿಗೆ ಹೃದಯಾಘಾತವಗಿ ಸಾವನ್ನಪ್ಪಿರುವ ಘಟನೆ ತುಮಕೂರಿನ ಪಾವಗಡ ಪಟ್ಟಣದಲ್ಲಿ ಘಟನೆ ನಡೆದಿದೆ. ಮಧುಗಿರಿ ತಾಲೂಕಿನ ಮಿಡಿಗೇಶಿ ಮೂಲದ ಮೈಥಿಲಿ ಎಂಬ ವಿದ್ಯಾರ್ಥಿನಿ ಮೃತ ದುರ್ಧೈವಿಯಾಗಿದ್ದು, ಶ್ರೀ ವೈ ಈ ರಂಗಯ್ಯಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫಸ್ಟ್ ಬಿಕಾಂ ಓದುತ್ತಿದ್ದಳು. ತರಗತಿ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ವಿದ್ಯಾರ್ಥಿನಿಗೆ ಹೃದಯಾಘಾತವಾಗಿದೆ. ಕುಸಿದು ಬಿದ್ದ ಮೈಥಿಲಿಯನ್ನು ಸಹಪಾಠಿಗಳು ಸೇರಿದಂತೆ ಸ್ಥಳೀಯರು ತಕ್ಷಣವೇ ಪಾವಗಡ ತಾಲ್ಲೂಕು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಾರ್ಗ ಮದ್ಯದಲ್ಲೇ ಮೈಥಿಲಿ ಮೃತಪಟ್ಟಿದ್ದಾರೆ. ಆಸ್ಪತ್ರೆ ದಾಖಲಿಸಿದರೂ ಪ್ರಯೋಜನವಾಗಲಿಲ್ಲ. ಮಾಹಿತಿ ತಿಳಿದು ಕುಟುಂಬಸ್ಥರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.