ಸಿದ್ದರಾಮಯ್ಯ ಅವರನ್ನು ಎದುರು ಕೂರಿಸಿಕೊಂಡೇ ಅಪಮಾನ ಮಾಡಿದ್ದಾರಲ್ಲ: ಸಿ.ಟಿ ರವಿ ಟೀಕೆ
ಬೆಂಗಳೂರು: ಸಿದ್ದರಾಮಯ್ಯ ಅವರನ್ನು ಎದುರು ಕೂರಿಸಿಕೊಂಡೇ ಅಪಮಾನ ಮಾಡಿದ್ದಾರಲ್ಲ ಎಂದು ಪರಿಷತ್ ಸದಸ್ಯ ಸಿ.ಟಿ ರವಿ ಟೀಕಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಎದುರೇ ಡಿಕೆಶಿ ಸಿಎಂ ಆಗಲಿ ಎಂಬ ಘೋಷಣೆ ಮೊಳಗಿಸುತ್ತಾರೆ. ಸಿದ್ದರಾಮಯ್ಯಗೆ ಇದು ದೊಡ್ಡ ಅಪಮಾನ. ಇದಕ್ಕಿಂತ ದೊಡ್ಡ ಅಪಮಾನ ಇಲ್ಲ.
ರಾಹುಲ್ ಗಾಂಧಿ, ಮನಮೋಹನ್ ಸಿಂಗ್ ಸಂಪುಟ ನಿರ್ಣಯದ ಪ್ರತಿ ಹರಿದು ಹಾಕಿದ್ದರು. ಕರ್ನಾಟಕದಲ್ಲಿ ಏನು ಕತೆ ಇದು? ಸಿದ್ದರಾಮಯ್ಯ ಅವರನ್ನು ಎದುರು ಕೂರಿಸಿಕೊಂಡೇ ಅಪಮಾನ ಮಾಡಿದ್ದಾರಲ್ಲ. ಸಿದ್ದರಾಮಯ್ಯ ಸ್ವಾಭಿಮಾನಿ ಎಂದು ನಾನು ಅಂದುಕೊಂಡಿದ್ದೆ.
ಅವರದ್ದು ಸ್ವಾಭಿಮಾನದ ರಾಜಕಾರಣ ಅಂದುಕೊಂಡಿದ್ದೆ. ನನ್ನಂಥವನು ಸಿಎಂ ಆಗಿ ಹೀಗೆಲ್ಲ ಆಗಿದ್ದರೆ ಒಂದು ಕ್ಷಣವೂ ನಾನು ಅಪಮಾನ ಸಹಿಸುತ್ತಿರಲಿಲ್ಲ. ಸಿದ್ದರಾಮಯ್ಯ ಅದು ಹೇಗೆ ಈ ಅಪಮಾನ ಸಹಿಸಿಕೊಂಡರೋ ಗೊತ್ತಿಲ್ಲ. ಇದು ನನಗೆ ಈಗಲೂ ಅರ್ಥವಾಗುತ್ತಿಲ್ಲ ಎಂದು ಟೀಕಿಸಿದ್ದಾರೆ..