ರೇಣುಕಾಸ್ವಾಮಿ ಕೊಲೆ ಪ್ರಕರಣದ ಏಳು ಆರೋಪಿಗಳಿಗೆ ಸುಪ್ರೀಂನಿಂದ ನೋಟೀಸ್!
ನವದೆಹಲಿ: ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ್ ಸೇರಿದಂತೆ ಎಲ್ಲ ಆರೋಪಿಗಳಿಗೆ ಜಾಮೀನು ಸಿಕ್ಕಿ ತಿಂಗಳಷ್ಟೇ ಕಳೆದಿದೆ. ಆಗಲೇ ಜಾಮೀನು ರದ್ದಾಗುವ ಆತಂಕ ಎಲ್ಲರಲ್ಲೂ ಮೂಡಿದೆ. ಕಾರಣ ಕೇಸ್‌ನಲ್ಲಿ ಜಾಮೀನು ನೀಡಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ಪೊಲೀಸರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇಂದು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆದಿದೆ.
ಈ ವೇಳೆ ಹೈಕೋರ್ಟ್ ವಿಸ್ತೃತ ಆದೇಶ ಪ್ರಕಟಿಸಿ ಆರೋಪಿಗಳಿಗೆ ಜಾಮೀನು ನೀಡಿದೆ. ಮೆರಿಟ್ ಮೇಲೆ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಈ ಅರ್ಜಿಯ ವಿಚಾರಣೆಗೆ ಆರೋಪಿಗಳ ವಾದವನ್ನು ಕೇಳಬೇಕಾಗುತ್ತದೆ ಎಂದು ಹೇಳಿಆರೋಪಿಗಳಿಗೆ ನೋಟಿಸ್ ಜಾರಿ ಮಾಡಿ ಕೋರ್ಟ್ ವಿಚಾರಣೆಯನ್ನು ಮುಂದೂಡಿತು. ಮುಂದಿನ ವಿಚಾರಣೆಯಲ್ಲಿ ಎರಡು ಕಡೆಯ ವಾದವನ್ನು ಆಲಿಸಿ, ನಂತರ ಕೋರ್ಟ್ ತನ್ನ ಆದೇಶವನ್ನು ಪ್ರಕಟಿಸಲಿದೆ.