ಮಹಾ ಕುಂಭಮೇಳದಲ್ಲಿ ಕಾಲ್ತುಳಿತದಲ್ಲಿ ಕರ್ನಾಟಕದ 4 ಮಂದಿ ಬಲಿ!

Date:

ಮಹಾ ಕುಂಭಮೇಳದಲ್ಲಿ ಕಾಲ್ತುಳಿತದಲ್ಲಿ ಕರ್ನಾಟಕದ 4 ಮಂದಿ ಬಲಿ!

ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಸುಮಾರು 50 ಜನ ಗಾಯಗೊಂಡಿದ್ದಾರೆ ಎನ್ನಲಾಗಿದ್ದು, ಕೆಲವರು ಮೃತಪಟ್ಟಿರುವ ಶಂಕೆಯೂ ವ್ಯಕ್ತವಾಗಿದೆ. ಇದೀಗ ಕರ್ನಾಟಕದ ಬೆಳಗಾವಿ ಮೂಲದ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.
ಅದರಲ್ಲಿ ತಾಯಿ ಹಾಗೂ ಮಗಳು ಕೂಡ ಬಲಿಯಾಗಿದ್ದಾರೆ. ವಡಗಾವಿ ನಿವಾಸಿಗಳಾದ ಜ್ಯೋತಿ ಹತ್ತರವಾಠನ ಹಾಗೂ ಮೇಘಾ ಹತ್ತರವಾಠ ಎಂಬುವವರು ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. 13 ಜನರ ಜೊತೆ ಮಹಾ ಕುಂಭಮೇಳಕ್ಕೆ ಹೋಗಿದ್ದಾಗ ಘಟನೆ ಸಂಭವಿಸಿದೆ. ಇನ್ನೂ ಬೆಳಗಾವಿಯ ನಗರದ ಶೆಟ್ಟಿಗಲ್ಲಿ ನಿಚಾಸಿ ಅರುಣ ಗೋರ್ಪಡೆ ಎಂಬುವವರು ಮೃತಪಟ್ಟಿದ್ದಾರೆ. ಅಲ್ಲದೇ ಬೆಳಗಾವಿ ಶಿವಾಜಿ ನಗರದ ನಿವಾಸಿ ಮಹಾದೇವಿ ಕೂಡ ಬಲಿಯಾಗಿದ್ದಾರೆ.
ಈ ವಿಚಾರ ತಿಳಿಯುತ್ತಿದ್ದಂತೆ ಅರಣು ಹಾಗೂ ಮಹಾದೇವಿ ಕುಟುಂಬಸ್ಥರಿಗೆ ಶಾಸಕ ಶಾಸಕ ರಾಜು ಸೇಠ್ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಪ್ರಯಾಗರಾಜ್ ಕುಂಭಮೇಳದಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟವರ ದೇಹಗಳನ್ನು ವಾಪಸ್ಸು ತರಲು ಜಿಲ್ಲಾಧಿಕಾರಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ಹಬ್ಬದ ಹೂವಿನ ಮರುಬಳಕೆ: ಎಸೆಯುವ ಬದಲು ಹೇಗೆಲ್ಲಾ ಮರು ಬಳಸಬಹುದು ಗೊತ್ತಾ..?

ಹಬ್ಬದ ಹೂವಿನ ಮರುಬಳಕೆ: ಎಸೆಯುವ ಬದಲು ಹೇಗೆಲ್ಲಾ ಮರು ಬಳಸಬಹುದು ಗೊತ್ತಾ..? ದಸರಾ,...

ನವರಾತ್ರಿ ಎಂಟನೇ ದಿನ – ಮಹಾಗೌರಿ !

ನವರಾತ್ರಿ ಎಂಟನೇ ದಿನ – ಮಹಾಗೌರಿ ! ದೇವಿಯ ಹಿನ್ನಲೆ ನವರಾತ್ರಿಯ ಎಂಟನೇ ದಿನ...

ಅಗತ್ಯ ಸೌಕರ್ಯ ತಕ್ಷಣವೇ ಒದಗಿಸಿ: ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ

ಅಗತ್ಯ ಸೌಕರ್ಯ ತಕ್ಷಣವೇ ಒದಗಿಸಿ: ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಸಲಹೆ ನವದೆಹಲಿ:ಕಲ್ಯಾಣ...