ಸಿಎಂ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣಗೆ ಜೈಲು ಶಿಕ್ಷೆ! ಯಾಕೆ ಗೊತ್ತಾ..?
ಮೈಸೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಭೂ ಹಂಚಿಕೆ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಆರೋಪಿಯಾಗಿದ್ದು. ಇದೀಗ ಅವರ ಮೇಲಿನ ಆರೋಪ ಸಾಬೀತಾಗಿದೆ. ಹೀಗಾಗಿ ಮೈಸೂರಿನ ಮೂರನೇ ಜೆಎಂಎಫ್ ಸಿ ನ್ಯಾಯಾಲಯವು ಸ್ನೇಹಮಯಿ ಕೃಷ್ಣಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಲಾಗಿದೆ.
ಹೌದು ಪತ್ರಿಕೆ ನಡೆಸಲು ಹಾಗೂ ಗೃಹೋಪಯೋಗಕ್ಕಾಗಿ ಕುಮಾರ್ ಎಂಬುವವರಿಂದ ಕೃಷ್ಣ ಅವರು 2015ರಲ್ಲಿ 1.75 ಲಕ್ಷ ರೂ ಸಾಲ ಪಡೆದಿದ್ದರು. ಈ ಸಂಬಂಧ ಸ್ನೇಹಮಯಿ ಕೃಷ್ಣ ಅವರು ಕೋಅಪರೇಟಿವ್ ಬ್ಯಾಂಕ್ ಚೆಕ್ ನೀಡಿದ್ದರು.
ಈ ಚೆಕ್ಅನ್ನು ಕುಮಾರ್ ಅವರು ಬ್ಯಾಂಕ್ಗೆ ಹಾಕಿದಾಗ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಕುಮಾರ್ ಅವರು ಸ್ನೇಹಮಯಿ ಕೃಷ್ಣ ಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಮೈಸೂರಿನ ಮೂರನೇ ಜೆಎಂಎಫ್ ಸಿ ನ್ಯಾಯಾಲಯವು, ಸ್ನೇಹಮಯಿ ಕೃಷ್ಣಗೆ ಶಿಕ್ಷೆ ವಿಧಿಸಿದೆ.