ಫುಟ್ಪಾತ್ ಮೇಲೆ ಗಾಡಿ ಹತ್ತಿಸಿದ್ರೆ ಜೋಕೆ: ಟ್ರಾಫಿಕ್ ಪೊಲೀಸರಿಂದ ಲೈಸೆನ್ಸ್ ಕ್ಯಾನ್ಸಲ್ ಅಸ್ತ್ರ ಪ್ರಯೋಗ

Date:

ಫುಟ್ಪಾತ್ ಮೇಲೆ ಗಾಡಿ ಹತ್ತಿಸಿದ್ರೆ ಜೋಕೆ: ಟ್ರಾಫಿಕ್ ಪೊಲೀಸರಿಂದ ಲೈಸೆನ್ಸ್ ಕ್ಯಾನ್ಸಲ್ ಅಸ್ತ್ರ ಪ್ರಯೋಗ

ಬೆಂಗಳೂರು: ಟ್ರಾಫಿಕ್ ರೂಲ್ಸ್ ಫಾಲೋ ಮಾಡಿ ಅಂತ ಟ್ರಾಫಿಕ್‌‌ ಪೊಲೀಸರು ಎಷ್ಟೇ ಎಚ್ಚರಿಕೆ ಕೊಟ್ಟರು ಚಾಲಕರು ಕ್ಯಾರೇ ಅನ್ನಲ್ಲ. ಪೊಲೀಸರು ಹಿಡಿಯಲ್ಲ ಅಂತ ರೂಲ್ಸ್ ಬ್ರೇಕ್ ಮಾಡುತ್ತಿದ್ದಾರೆ. ಟ್ರಾಫಿಕ್ಸ್‌ ರೂಲ್ಸ್‌ ದಂಡ ಡಬಲ್‌ ಆದರೂ ಡಿಜಿಟಲ್‌ ಕ್ಯಾಮೆರಾದಲ್ಲಿ ದಂಡ ಹಾಕಿದರೂ ಜನ ಮಾತ್ರ ಡೋಂಟ್‌ ಕೇರ್‌ ಮಾಸ್ಟರ್ಸ್‌. ನಾವು ರೂಲ್ಸ್ ಬ್ರೇಕ್ ಮಾಡೊಕೇ ಇರೋದು ಅನ್ನೋ ರೀತಿ ವಾಹನ ಚಲಾಯಿಸ್ತಾರೆ. ಇಂತವರಿಗೆ ಪಾಠ ಕಲಿಸಲು ಬೆಂಗಳೂರು ಸಂಚಾರ ಪೊಲೀಸರು ನಿರ್ಧರಿಸಿದ್ದಾರೆ.
ಹೌದು ಟ್ರಾಫಿಕ್ ಜಾಮ್ ಅಂತ ಫುಟ್ಪಾತ್ ಮೇಲೆ ಗಾಡಿ ಓಡಿಸುವವರ ವಿರುದ್ಧ ನೂತನ ಅಸ್ತ್ರ ಪ್ರಯೋಗಿಸಲು ಬೆಂಗಳೂರು ಸಂಚಾರಿ ಪೊಲೀಸರು ನಿರ್ಧರಿಸಿದ್ದಾರೆ. ದಂಡಾಸ್ತ್ರಕ್ಕೂ ಜಗ್ಗದ ವಾಹನ ಸವಾರರ ಡ್ರೈವಿಂಗ್ ಲೈಸೆನ್ಸ್ ಅಮಾನತು ಮಾಡಲು ತೀರ್ಮಾನಿಸಿದ್ದಾರೆ. ಪಾದಚಾರಿಗಳ ಸುರಕ್ಷತೆ ದೃಷ್ಠಿಯಿಂದ ಸಂಚಾರಿ ಪೊಲೀಸರು ಈ ನಿಯಮ ಜಾರಿಗೆ ತಂದಿದ್ದಾರೆ.
ಬೆಂಗಳೂರು ಸಂಚಾರಿ ಪೊಲೀಸ್ ಹಿರಿಯ ಅಧಿಕಾರಿಗಳು ಸಭೆ ನಡೆಸಿ, ಡ್ರೈವಿಂಗ್ ಲೈಸೆನ್ಸ್ ಅಮಾನತು ಮಾಡುವ ನಿರ್ಧಾರ ಕೈಗೊಂಡಿದ್ದಾರೆ. ಮೊದಲ ಬಾರಿಗೆ ದಂಡ ಹಾಕಲಾಗುತ್ತದೆ. ಮತ್ತೆ ಮತ್ತೆ ಸಿಕ್ಕಿಬಿದ್ದರೇ, ಆತನ ಲೈಸೆನ್ಸ್ ಅಮಾನತು ಮಾಡುವಂತೆ ಸಂಚಾರಿ ಪೊಲೀಸರು ಶಿಪಾರಸ್ಸು ಮಾಡುತ್ತಾರೆ. ಹೀಗಾಗಿ, ಇನ್ಮುಂದೆ ಫುಟ್ಪಾತ್ ಮೇಲೆ ಗಾಡಿ ಓಡಿಸುವ ಮುನ್ನ ಯೋಚಿಸಿ ಎಂದು ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್: ತರಾತುರಿಯಲ್ಲಿ ಎಸ್‌ಐಟಿ ರಚಿಸಿ ಶ್ರೀ ಕ್ಷೇತ್ರಕ್ಕೆ ಧಕ್ಕೆ – ನಿಖಿಲ್ ಕುಮಾರಸ್ವಾಮಿ

ಧರ್ಮಸ್ಥಳ ಕೇಸ್: ತರಾತುರಿಯಲ್ಲಿ ಎಸ್‌ಐಟಿ ರಚಿಸಿ ಶ್ರೀ ಕ್ಷೇತ್ರಕ್ಕೆ ಧಕ್ಕೆ -...

ಧರ್ಮಸ್ಥಳ ಪ್ರಕರಣ: ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ಸರ್ಕಾರದ ಉದ್ದೇಶ – ಡಿ.ಕೆ. ಶಿವಕುಮಾರ್

ಧರ್ಮಸ್ಥಳ ಪ್ರಕರಣ: ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ಸರ್ಕಾರದ ಉದ್ದೇಶ - ಡಿ.ಕೆ....

ಮತ್ತೆ ಏರಿಕೆ ಕಂಡ ಬಂಗಾರ: ಇಂದು ಚಿನ್ನದ ಬೆಲೆ ಎಷ್ಟು ಏರಿಕೆ ಆಗಿದೆ ಗೊತ್ತಾ?

ಮತ್ತೆ ಏರಿಕೆ ಕಂಡ ಬಂಗಾರ: ಇಂದು ಚಿನ್ನದ ಬೆಲೆ ಎಷ್ಟು ಏರಿಕೆ...

ನವರಾತ್ರಿಯ ಆರನೇ ದಿನ (ಷಷ್ಠೀ ತಿಥಿ) ಪೂಜಿಸಲ್ಪಡುವ ದೇವಿ ಮಾ ಕಾತ್ಯಾಯನಿ ಕಥೆ !

ನವರಾತ್ರಿಯ ಆರನೇ ದಿನ (ಷಷ್ಠೀ ತಿಥಿ) ಪೂಜಿಸಲ್ಪಡುವ ದೇವಿ ಮಾ ಕಾತ್ಯಾಯನಿ...