ರಾಜ್ಯಾಧ್ಯಕ್ಷನಾಗಿ ಮುಂದುವರಿದು ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತೇನೆ: ಬಿ.ವೈ.ವಿಜಯೇಂದ್ರ
ಶಿವಮೊಗ್ಗ: ರಾಜ್ಯಾಧ್ಯಕ್ಷನಾಗಿ ಮುಂದುವರಿದು ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ನಮ್ಮ ಎಲ್ಲಾ ಕಾರ್ಯಕರ್ತರು, ಪಕ್ಷದ ಹಿರಿಯರು ಒಟ್ಟಾಗಿ ಈ ಭ್ರಷ್ಟ ಹಾಗೂ ದುಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರಂತರವಾಗಿ ಹೋರಾಟವನ್ನು ಮಾಡಿಕೊಂಡು ಬಂದಿದ್ದೇವೆ.
ನನ್ನ ಕಳೆದ ಒಂದು ವರ್ಷದ ಅವಧಿಯಲ್ಲಿ, ರಾಜ್ಯಾಧ್ಯಕ್ಷನಾಗಿ ಯಾವ ರೀತಿ ಕೆಲಸ ಮಾಡಿದ್ದೇನೆ ಎಂಬುದು ರಾಜ್ಯದ ಜನತೆಗೂ ಗೊತ್ತಿದೆ, ನಮ್ಮ ಕಾರ್ಯಕರ್ತರಿಗೂ ಗೊತ್ತಿದೆ. ಪಕ್ಷದ ಹಿರಿಯರು, ಶಾಸಕರಿಗೂ ಕೂಡ ಗೊತ್ತಿದೆ. ಎಲ್ಲರ ಸಹಕಾರದಿಂದ ರಾಜ್ಯಾಧ್ಯಕ್ಷನಾಗಿ ಮುಂದುವರಿದು ಪಕ್ಷವನ್ನು ಬಲಪಡಿಸುವ ಕೆಲಸ ಮಾಡುತ್ತೇನೆ ಎನ್ನುವ ಸಂಪೂರ್ಣ ವಿಶ್ವಾಸ ನನಗಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಇನ್ನೂ ಯತ್ನಾಳ್ ಬಣದ ಕುರಿತು ಪ್ರತಿಕ್ರಿಯಿಸಿ, ಬಿಜೆಪಿಯ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಅವರ ನೇತೃತ್ವದ ಬಣ ರಾಜ್ಯಾಧ್ಯಕ್ಷರ ಹುದ್ದೆಗೆ ಸ್ಪರ್ಧಿಸುವ ತಯಾರಿ ನಡೆಸಿದೆ ಎಂದರು.