ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು; ಸರ್ಜಾಪುರ ಪೊಲೀಸರಿಂದ ಆರೋಪಿ ಮೇಲೆ ಫೈರಿಂಗ್

Date:

ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು; ಸರ್ಜಾಪುರ ಪೊಲೀಸರಿಂದ ಆರೋಪಿ ಮೇಲೆ ಫೈರಿಂಗ್

 

 

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಇನ್ಸ್ ಪೆಕ್ಟರ್ ನವೀನ್ ಕುಮಾರ್ ಅವರು ರೌಡಿಶೀಟರ್ ಶ್ರೀನಿವಾಸ್ ಅಲಿಯಾಸ್ ಗುಬ್ಬಚ್ಚಿ ಸೀನನ ಕಾಲಿಗೆ ಕಾಲಿಗೆ ಫೈರಿಂಗ್ ಮಾಡಿದ್ದಾರೆ. ದೊಮ್ಮಸಂದ್ರದ ಬಳಿ ರೌಡಿ ಶೀಟರ್ ಗುಬ್ಬಚ್ಚಿ ಸೀನಾ ಅವಿತು ಕುಳಿತಿದ್ದನು.

ಕಳೆದ ತಿಂಗಳು 28ನೇ ತಾರೀಖಿನ ರಾತ್ರಿ ಮಾಜಿ ರೌಡಿ ಶೀಟರ್ ವೆಂಕಟೇಶ್ ಅಲಿಯಾಸ್ ವೆಂಕಿಯನ್ನು ಬರ್ಬರವಾಗಿ ಕೊಲೆ ಮಾಡಿದ್ದ ಶ್ರೀನಿವಾಸ್ ಗ್ಯಾಂಗ್ ಪರಾರಿಯಾಗಿದ್ದತ್ತು. ದೊಮ್ಮಸಂದ್ರದ ಬಳಿ ರೌಡಿ ಶೀಟರ್ ಗುಬ್ಬಚ್ಚಿ ಸೀನ ಅವಿತು ಕುಳಿತಿದ್ದ ಎನ್ನುವ ಮಾಹಿತಿ ಮೇರೆಗೆ ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ.

ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಗುಬ್ಬಚ್ಚಿ ಸೀನ ಯತ್ನಿಸಿದ್ದಾನೆ. ಈ ವೇಳೆ ಇನ್ಸ್‌ಪೆಕ್ಟರ್ ನವೀನ್ ಕುಮಾರ್ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ತಿಳಿಸಿದ್ದಾರೆ. ಆಗ ರೌಡಿಶೀಟರ್ ಗುಬ್ಬಚ್ಚಿ ಸೀನ ಪೊಲೀಸ್ ಪೇದೆ ಇರ್ಫಾನ್ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಈ ವೇಳೆ ಇನ್ಸ್ ಪೆಕ್ಟರ್ ನವೀನ್ ಅವರು ಆತ್ಮರಕ್ಷಣೆಗಾಗಿ ಆರೋಪಿ ಕಾಲಿಗೆ ಫೈರ್ ಮಾಡಿದ್ದಾರೆ. ರೌಡಿ ಶೀಟರ್ ಗುಬ್ಬಚ್ಚಿ ಸೀನನ ಕಾಲಿಗೆ ಗುಂಡೇಟು ಬಿದ್ದಿದ್ದು, ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್‌ʼನಲ್ಲಿ ಎಸ್‌ಐಟಿ ರಚನೆ: ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದೇನು..? 

ಧರ್ಮಸ್ಥಳ ಕೇಸ್‌ʼನಲ್ಲಿ ಎಸ್‌ಐಟಿ ರಚನೆ: ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದ್ದೇನು..?  ಮಂಗಳೂರು:...

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ!

ಪಂಚಭೂತಗಳಲ್ಲಿ ಲೀನರಾದ ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ! ಮೈಸೂರು: ಹಿರಿಯ ಸಾಹಿತಿ...

ನವರಾತ್ರಿ ಐದನೇ ದಿನ ಆರಾಧಿಸುವ ದೇವಿ ಸ್ಕಂದಮಾತೆ !

ನವರಾತ್ರಿ ಐದನೇ ದಿನ ಆರಾಧಿಸುವ ದೇವಿ ಸ್ಕಂದಮಾತೆಯ ಹಿನ್ನಲೆ ನೋಡೊದಾದ್ರೆ, ಸ್ಕಂದಮಾತೆ...

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

ಎಸ್.ಎಲ್. ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ನಾಡಿನ...