ಮದುವೆಯಲ್ಲಿ ಖುಷಿಯಿಂದ ಕುಣಿಯುತ್ತಿದ್ದ ವೇಳೆ ಹೃದಯಾಘಾತ! ಯುವತಿ ಸಾವು
ಜಗತ್ತಿನಲ್ಲಿ ಇಂದು ಅತಿ ಹೆಚ್ಚು ಕಾಡುತ್ತಿರುವ ಆರೋಗ್ಯ ಸಮಸ್ಯೆಗಳಲ್ಲಿ ಹೃದಯ ಸಂಬಂಧಿ ಸಮಸ್ಯೆಗಳು ಅಗ್ರಸ್ಥಾನದಲ್ಲಿದೆ. ಇತ್ತೀಚಿನ ವರ್ಷಗಳಲ್ಲಿ ಯುವಜನತೆ ಮತ್ತು ಮಧ್ಯವಯಸ್ಸಿನವರು ಹೆಚ್ಚಾಗಿ ಹೃದಯಾಘಾತಕ್ಕೆ ತುತ್ತಾಗುತ್ತಿದ್ದಾರೆ.
ಇದೀಗ ಕುಟುಂಬದ ಮದುವೆಯೊಂದರಲ್ಲಿ ವೇದಿಕೆ ಮೇಲೆ ನೃತ್ಯ ಮಾಡುತ್ತಿರುವಾಗಲೇ ಯುವತಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ. ರೆಸಾರ್ಟ್ವೊಂದರಲ್ಲಿ ಮದುವೆ ಸಮಾರಂಭ ಆಯೋಜಿಸಲಾಗಿತ್ತು. ಯುವತಿಯೊಬ್ಬರು ಖುಷಿ ಖುಷಿಯಿಂದ ವೇದಿಕೆ ಮೇಲೆ ನೃತ್ಯ ಮಾಡುತ್ತಿದ್ದಳು, ಏಕಾಏಕಿ ಕುಸಿದುಬಿದ್ದಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಘರ್ಕೆಕಲೇಶ್ ಎಂಬ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ.
ವಿಡಿಯೋದಲ್ಲಿ ಸೀರೆಯುಟ್ಟ ಯುವತಿ ಬಾಲಿವುಡ್ನ ಲೆಹ್ರಾ ಕೆ ಬಲ್ಖಾ ಕೆ ಹಾಡಿಗೆ ನೃತ್ಯ ಮಾಡುತ್ತಿದ್ದಳು, ಇದ್ದಕ್ಕಿಂದ್ದಂತೆ ಕುಸಿದುಬೀಳುವುದನ್ನು ಕಾಣಬಹುದು. ವಿವರಗಳ ಪ್ರಕಾರ,ಮೃತಳನ್ನು ಪರಿಣಿತಾ ಜೈನ್ ಎಂದು ಗುರುತಿಸಲಾಗಿದೆ. ಅವರು ಇಂದೋರ್ ನಿವಾಸಿಯಾಗಿದ್ದರು. ಮ್ಮ ಸೋದರಸಂಬಂಧಿಯ ಸಹೋದರಿಯ ವಿವಾಹ ಸಮಾರಂಭದಲ್ಲಿ ಭಾಗವಹಿಸಲು ವಿದಿಶಾಗೆ ಬಂದಿದ್ದರು. ‘ಹಲ್ದಿ’ ಕಾರ್ಯಕ್ರಮದ ಸಮಯದಲ್ಲಿ ವೇದಿಕೆಯ ಮೇಲೆ ನೃತ್ಯ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.