No menu items!
13.3 C
Munich
Thursday, April 30, 2026

ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಮಹಂತ್‌ ಸತ್ಯೇಂದ್ರ ದಾಸ್‌ ಇನ್ನಿಲ್ಲ

Must read

ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಮಹಂತ್‌ ಸತ್ಯೇಂದ್ರ ದಾಸ್‌ ಇನ್ನಿಲ್ಲ

ಅಯೋಧ್ಯೆಯ ರಾಮ ಜನ್ಮಭೂಮಿ ದೇವಸ್ಥಾನದ ಮುಖ್ಯ ಅರ್ಚಕರಾಗಿದ್ದ ಮಹಂತ್ ಸತ್ಯೇಂದ್ರ ದಾಸ್ ಅವರು ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಹಂತ್ ಸತ್ಯೇಂದ್ರ ದಾಸ್ ಅವರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಫೆಬ್ರವರಿ 3 ರಂದು ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರನ್ನು ಗಂಭೀರ ಸ್ಥಿತಿಯಲ್ಲಿ ನರವಿಜ್ಞಾನ ವಾರ್ಡ್‌ನ HDU ಗೆ ದಾಖಲಿಸಲಾಯಿತು. ಆಚಾರ್ಯ ಸತ್ಯೇಂದ್ರ ದಾಸ್ ತಮ್ಮ 85 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ಸತ್ಯೇಂದ್ರ ದಾಸ್ ಅವರು ಪಾರ್ಶ್ವವಾಯುದಿಂದ ಬಳಲುತ್ತಿದ್ದರು. ಜತೆಗೆ, ಮಧುಮೇಹ ಮತ್ತು ರಕ್ತದೊತ್ತಡ ಹೆಚ್ಚಾಗಿದ್ದು, ನ್ಯೂರಾಲಜಿ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಸತ್ಯೇಂದ್ರ ದಾಸ್ 1992ರ ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದಾಗ ತಾತ್ಕಾಲಿಕ ರಾಮ ಮಂದಿರದ ಅರ್ಚಕರಾಗಿದ್ದರು.
ಅವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾಗ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಕೆಲವು ದಿನಗಳ ಹಿಂದೆ ಅವರನ್ನು ಭೇಟಿ ಮಾಡಿ ಅವರ ಯೋಗಕ್ಷೇಮ ವಿಚಾರಿಸಿದ್ದರು. ಸತ್ಯೇಂದ್ರ ದಾಸ್ ಅವರ ನಿಧನಕ್ಕೆ ಶೋಕ ವ್ಯಕ್ತವಾಗಿದೆ. ಆಚಾರ್ಯ ಸತ್ಯೇಂದ್ರ ದಾಸ್ ಅವರ ನಿಧನವನ್ನು ರಾಮ ಮಂದಿರ ಟ್ರಸ್ಟ್ ದೃಢಪಡಿಸಿದೆ.

- Advertisement -spot_img

More articles

- Advertisement -spot_img

Latest article