ಭೀಮಾ ತೀರದಲ್ಲಿ ಮತ್ತೆ ಹರಿದ ರಕ್ತದೋಕುಳಿ: ಬಾಗಪ್ಪ ಹರಿಜನ್ ಬರ್ಬರ ಹತ್ಯೆ
ವಿಜಯಪುರ: ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ಭೀಮಾತೀರದ ಹಂತಕ ಬಾಗಪ್ಪ ಹರಿಜನನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಜಯಪುರದ ಮದಿನಾ ನಗರದಲ್ಲಿ ನಡೆದಿದೆ. ಮುಖ, ತಲೆ ಸೇರಿದಂತೆ ಸಿಕ್ಕ ಸಿಕ್ಕಲಿ ಹೊಡೆದು ಬಾಗಪ್ಪನನ್ನ ಕೊಲೆ ಮಾಡಲಾಗಿದ್ದು, ಈ ಹಿಂದೆ ಕೋರ್ಟ್ ಆವರಣದಲ್ಲಿಯೇ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿಯಾಗಿತ್ತು. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ. ಆದರೆ ಈ ಸಲ ಹಂತಕರು ಬಾಗಪ್ಪನನ್ನು ಬಿಡಲಿಲ್ಲ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಮನೆಯವರು ನೀಡಿದ ಮಾಹಿತಿ ಆಧರಿಸಿ ಹೇಳ್ತಿದ್ದೇನೆ. ಕರೆಂಟ್ ಕಟ್ ಮಾಡಿ ಹತ್ಯೆ ಮಾಡಿದ್ದ ಬಗ್ಗೆ ಮಾಹಿತಿ ಇಲ್ಲ. ಸಂಬಂಧಿಕರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಸ್ಪಷ್ಟಪಡಿಸಿದ್ದಾರೆ. ಬಾಗಪ್ಪ ಮೇಲೆ 10 ಕೇಸ್‌ಗಳಿವೆ. ಈ ಪೈಕಿ 6 ಮರ್ಡರ್ ಕೇಸ್ ಇವೆ. 1993 ರಿಂದ ಬಾಗಪ್ಪನ ಕ್ರಿಮಿನಲ್ ಹಿಸ್ಟರಿ ಶುರುವಾಗಿದೆ. 2016-17ರಲ್ಲಿ ಬಾಗಪ್ಪನ ಮೇಲೆ ಸೆಕ್ಯೂರಿಟಿ ಕೇಸ್ ಹಾಕಲಾಗಿತ್ತು. ಸದ್ಯ ಎಲ್ಲ ಆಯಾಮಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಜಿಲ್ಲಾ ಪೊಲೀಸ್ ಟೀಂ ತಂಡವಾಗಿ ಕೆಲಸ ಮಾಡ್ತಿದೆ ಎಂದು ತಿಳಿಸಿದ್ದಾರೆ.