ಕರ್ನಾಟಕದಲ್ಲಿ ಮೈಕ್ರೋಫೈನಾನ್ಸ್ ಹಾವಳಿಗೆ ಬ್ರೇಕ್: ರಾಜ್ಯಪಾಲರಿಂದ ಸುಗ್ರೀವಾಜ್ಞೆಗೆ ಅನುಮೋದನೆ

Date:

ಕರ್ನಾಟಕದಲ್ಲಿ ಮೈಕ್ರೋಫೈನಾನ್ಸ್ ಹಾವಳಿಗೆ ಬ್ರೇಕ್: ರಾಜ್ಯಪಾಲರಿಂದ ಸುಗ್ರೀವಾಜ್ಞೆಗೆ ಅನುಮೋದನೆ

ಬೆಂಗಳೂರು: ಕೆಲ‌ ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರಾಜ್ಯಪಾಲರ ಅನುಮೋದನೆಗಾಗಿ ಮೈಕ್ರೋ ಸುಗ್ರೀವಾಜ್ಞೆಯನ್ನು ಕಳುಹಿಸಿತ್ತು. ಆದರೆ ರಾಜ್ಯಪಾಲರು ಕೆಲ ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಸುಗ್ರೀವಾಜ್ಞೆಯನ್ನು ವಾಪಸ್ ಕಳುಹಿಸಿದ್ದರು. ಇದೀಗ ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್ನವರ ಅಟ್ಟಹಾಸಕ್ಕೆ ಕೊನೆಗೂ ಲಗಾಮು ಬಿದ್ದಿದೆ. ಆ ಮೂಲಕ ಸರ್ಕಾರದ ಅಸ್ತ್ರ ಸುಗ್ರೀವಾಜ್ಞಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅಂಕಿತ ಹಾಕಿದ್ದಾರೆ. ಜೊಗೆ ಹಲವು ಸಲಹೆಗಳನ್ನು ನೀಡಿದ್ದು, ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸುವಂತೆ ಸೂಚನೆ ನೀಡಿದ್ದಾರೆ.
ಹೌದು ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. ಹಲವು ಸಲಹೆಗಳನ್ನು ಪರಿಗಣಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಸುಗ್ರೀವಾಜ್ಞೆಯನ್ನು ವಿಧಾನ ಮಂಡಲದಲ್ಲಿ ಚರ್ಚಿಸುವಂತೆ ರಾಜ್ಯಪಾಲರು ಸೂಚಿಸಿದ್ದಾರೆ. ಇದರಿಂದ ಮೈಕ್ರೋ ಫೈನಾನ್ಸ್ ಕ್ಷೇತ್ರದಲ್ಲಿ ಹೊಸ ನಿಯಮಗಳು ಜಾರಿಗೆ ಬರುವ ಸಾಧ್ಯತೆಯಿದೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಚರ್ಚೆ ನಡೆಯಲಿದೆ.
ಕರ್ನಾಟದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್‌ ಹಾಕಬೇಕು ಅಂತಾ ಹೊರಟ ಸರ್ಕಾರ ಸುಗ್ರೀವಾಜ್ಞೆ ಮೊರೆ ಹೋಗಿತ್ತು. ಕಠಿಣ ಕಾನೂನು ರೂಪಿಸಿ ರಾಜ್ಯಪಾಲರಿಗೆ ರವಾನಿಸಿದ್ದರು. ಆದರೆ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ನಿರಾಕರಸಿದ್ದ ರಾಜ್ಯಪಾಲರು, ಸರ್ಕಾರಕ್ಕೆ ವಾಪಸ್‌ ಕಳಿಸಿದ್ದರು. ಇದರಲ್ಲಿರುವ ಅಂಶಗಳನ್ನ ನೋಡಿದರೆ ಮುಂದಿನ ದಿನಗಳಲ್ಲಿ ಮಾರಕ ಆಗಲಿದೆ ಅನ್ನೋ ಕಾರಣ ನೀಡಿ ಸರ್ಕಾರ ಸ್ಪಷ್ಟನೆ ಕೇಳಿ ವಾಪಸ್‌ ಮಾಡಿದ್ದರು.
ಅಷ್ಟೇ ಅಲ್ಲ ಬಜೆಟ್ ಅಧಿವೇಶನದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಸಾಧಕ ಬಾಧಕದ ಬಗ್ಗೆ ಚರ್ಚೆ ನಡೆಸಿ ಅಂತಾ ಹೇಳಿದ್ದ ರಾಜ್ಯಪಾಲರು, ಈಗಿರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮಕೈಗೊಳ್ಳುತ್ತಿಲ್ಲ ಅಂತಾ ಪೊಲೀಸ್‌ ವ್ಯವಸ್ಥೆ ಬಗ್ಗೆಯೂ ಅಸಮಾಧನ ಹೊರಹಾಕಿದ್ದರು. ಮೈಕ್ರೋ ಫೈನಾನ್ಸ್ ವಿರುದ್ಧ ಮತ್ತೊಂದು ಕಾನೂನಿನ ಅಗತ್ಯತೆ ಕಾಣುತ್ತಿಲ್ಲ ಅಂತಾ ಖಡಕ್‌ ಸಂದೇಶ ರವಾನಿಸಿ ಸುಗ್ರೀವಾಜ್ಞೆ ವಾಪಸ್‌ ಮಾಡಲಾಗಿತ್ತು.

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....