No menu items!
20.3 C
Munich
Friday, August 21, 2026

ನಮ್ಮ ಮೆಟ್ರೋ ದರ ಕಡಿತಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

Must read

ನಮ್ಮ ಮೆಟ್ರೋ ದರ ಕಡಿತಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿ ಬಿಎಂಆರ್‌ಸಿಎಲ್ ಪ್ರಯಾಣಿಕರ ಮೇಲೆ ಗದಾ ಪ್ರಹಾರ ಮಾಡಿದೆ. ದರ ಏರಿಕೆಯಿಂದ ಕಂಗೆಟ್ಟಿರೋ ಪ್ರಯಾಣಿಕರು ಬಿಎಂಆರ್‌ಸಿಎಲ್ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಮತ್ತೊಂದೆಡೆ, ಮೆಟ್ರೋ ಪ್ರಯಾಣ ದರ ಏರಿಕೆ ಕಾಂಗ್ರೆಸ್-ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟಕ್ಕೂ ಕಾರಣವಾಗಿದೆ. ದರ ಏರಿಕೆಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಆರೋಪಿಸಿ ಬಿಜೆಪಿ ಆರೋಪಿಸಿದ್ದು, ಇದೀಗ ಜನರ ಹೋರಾಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಣಿದಿದ್ದು ನಮ್ಮ ಮೆಟ್ರೋ ದರ ಕಡಿತಗೊಳಿಸಲು ಸೂಚನೆ ನೀಡಿದ್ದಾರೆ.
ಹೌದು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ.. ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ.
ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್‌ಸಿಎಲ್ ಗಮನಕ್ಕೆ ತಂದಿದ್ದೇನೆ ಎಂದು ತಿಳಿಸಿದ್ದಾರೆ.

- Advertisement -spot_img

More articles

- Advertisement -spot_img

Latest article