ಕ್ಷುಲ್ಲಕ ಕಾರಣಕ್ಕೆ ಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ..! ಆರೋಪಿ ಅರೆಸ್ಟ್

Date:

ಕ್ಷುಲ್ಲಕ ಕಾರಣಕ್ಕೆ ಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಬರ್ಬರ ಕೊಲೆ..! ಆರೋಪಿ ಅರೆಸ್ಟ್

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಶುರುವಾದ ಗಲಾಟೆ ಗೋವಾದ ಮಾಜಿ ಶಾಸಕರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಬೆಳಗಾವಿಯ ಖಡೇಬಜಾರ್ ನಲ್ಲಿ ಇರೋ ಶ್ರೀನಿವಾಸ ಲಾಡ್ಜ್ ಮುಂದೆ ನಡೆದಿದೆ. ಗೋವಾದ ಪೋಂಡಾ ಕ್ಷೇತ್ರದ ಶಾಸಕರಾಗಿದ್ದ ಲಾವೂ ಮಾಮಲೇದಾರ್ ಮೃಥ ದುರ್ಧೈವಿಯಾಗಿದ್ದು, ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನೇ ಲಾವೂ ಮಾಮಲೇದಾರ್ ಮೇಲೆ ಏಕಾಏಕಿ ದಾಳಿ ಮಾಡಿದ್ದಾನೆ. ಪರಿಣಾಮ ಮಾಜಿ ಶಾಸಕ ಲಾವೂ ಮಾಮಲೇದಾರ್ ಸ್ಥಳದಲ್ಲೇ ಕುಸಿದುಬಿದ್ದು ಮೃತಪಟ್ಟಿದ್ದಾರೆ.
ಗೋವಾದ ಪೋಂಡಾ ಕ್ಷೇತ್ರದ ಶಾಸಕರಾಗಿದ್ದ ಲಾವೋ ಮಾಮಲೇದಾರ್ ಇಂದು ಬೆಳಗಾವಿಗೆ ಆಗಮಿಸಿದ್ದರು. ಈ ವೇಳೆ ಬೆಳಗಾವಿಯ ಖಡೇಬಜಾರ್ ಬಳಿಕ ಆಟೋಗೆ ಮಾಜಿ ಶಾಸಕರ ಕಾರು ಟಚ್ ಆಗಿದೆ. ರಸ್ತೆಯಲ್ಲಿ ಎಷ್ಟೇ ಕೂಗಿದರೂ ಕೇರ್ ಮಾಡದೇ ಹೊರಟ ಮಾಜಿ ಶಾಸಕ ಲಾವೋ ಮಾಮಲೇದಾರ್ ಕಾರನ್ನು ಆಟೋ ಚಾಲಕ ಹಿಂಬಾಲಿಕೊಂಡು ಹೋಗಿದ್ದಾನೆ.
ಬಳಿಕ ಲಾವೋ ಮಾಮಲೇದಾರ್ ಅವರು ಶ್ರೀನಿವಾಸ ಲಾಡ್ಜ್ ಬಳಿ ಬಂದು ನಿಂತಿದ್ದಾಗ ಆಟೋ ಚಾಲಕ ಜಗಳ ಆರಂಭಿಸಿದ್ದಾನೆ. ಆಗ ಮಾತಿಗೆ ಮಾತು ಬೆಳೆದು ಆಟೋ ಚಾಲಕ ಲಾವೋ ಮಾಮಲೇದಾರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಆಗ ಸ್ಥಳೀಯರು ಹಾಗೂ ಲಾಡ್ಜ್‌ನ ಸಿಬ್ಬಂದಿ ಬಂದು ಇಬ್ಬರ ಜಗಳವನ್ನು ಬಿಡಿಸಿದ್ದಾರೆ ಎಂದು ತಿಳಿದುಬಂದಿದೆ.
ಬಳಿಕ ಮಾಜಿ ಶಾಸಕ ಲಾವೂ ಮಾಮಲೇದಾರ್ ತಾವು ತಂಗಿದ್ದ ಲಾಡ್ಜ್‌ಗೆ ಹೋಗುವಾಗ ಮೆಟ್ಟಿಲು ಏರಲು ಆಗದೇ ಕುಸಿದು ಬಿದ್ದು ಮೃತಟ್ಟಿದ್ದಾರೆ. ಇನ್ನು ಘಟನೆಯ ಸಂಪೂರ್ಣ ದೃಶ್ಯ ಲಾಡ್ಜ್‌ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಾರ್ಕೆಟ್ ಠಾಣೆ ಪೊಲೀಸರು ತಕ್ಷಣವೇ ಆಟೋ ಚಾಲಕ ಆರೋಪಿ ಮುಜಾಹಿದ್ ಶಕೀಲ್ ಸನದಿ ಎನ್ನುವಾತನನ್ನು ಬಂಧಿಸಿದ್ದಾರೆ. ಇನ್ನು ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್ ಹಾಗೂ ಕಮಿಷನರ್ ಭೇಟಿ, ಪರಿಶೀಲನೆ ನಡೆಸಿದ್ದು, ಮಾಜಿ ಶಾಸಕ ಲಾವೂ ಮಾಮಲೇದಾರ್ ಮೃತದೇಹವನ್ನು ಬೆಳಗಾವಿ ಬಿಮ್ಸ್‌ಗೆ ರವಾನೆ ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ

ಕಾರಾಗೃಹದಲ್ಲಿ ಅತ್ಯಾಚಾರಿಗಳಿಗೆ, ಉಗ್ರರಿಗೆ ರಾಜಾತಿಥ್ಯಕ್ಕೆ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಆಕ್ರೋಶ ಬೆಂಗಳೂರು: ಪರಪ್ಪನ...

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ

ಪರಪ್ಪನ ಅಗ್ರಹಾರ ಜೈಲಲ್ಲಿ ಬಿಂದಾಸ್ ಲೈಫ್: ಇಬ್ಬರು ಅಧಿಕಾರಿಗಳ ತಲೆದಂಡ ಬೆಂಗಳೂರು: ಪರಪ್ಪನ...

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ!

ಜೈಲಿನ ರಾಜಾತಿಥ್ಯದ ವಿಡಿಯೋ ರಿಲೀಸ್: ದರ್ಶನ್ ಆಪ್ತ ಧನ್ವೀರ್ ಸಿಸಿಬಿ ವಶಕ್ಕೆ! ರೇಣುಕಾಸ್ವಾಮಿ...

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ ಸಾಧ್ಯತೆ!

ಡಿ ಗ್ಯಾಂಗ್​ ದೋಷಾರೋಪ ನಿರಾಕರಣೆ: ಇಂದು ಸಾಕ್ಷ್ಯ ವಿಚಾರಣೆಗೆ ದಿನಾಂಕ ನಿಗದಿಪಡಿಸುವ...