ದಾಂಪತ್ಯ ಜೀವನಕ್ಕೆ ಕಾಲಿಟ್ಟ ಡಾಲಿ ಧನಂಜಯ್ ಹಾಗೂ ಧನ್ಯತಾ
ಅರಮನೆ ನಗರಿಯಲ್ಲಿ ಡಾಲಿ ಧನಂಜಯ್ ಹಾಗೂ ಧನ್ಯತಾ ವಿವಾಹ ನಡಿದಿದೆ. ನಟ ಡಾಲಿ ಡಾಕ್ಟರ್ ಧನ್ಯತಾ ಕೊರಳಿಗೆ ಮಾಂಗಲ್ಯ ಕಟ್ಟಿದ್ದು, ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬಸ್ಥರು ಆಪ್ತ ಸ್ನೇಹಿತರ ಮಧ್ಯೆ ನಟ ರಾಕ್ಷಸ ಡಾಲಿ ಧನಂಜಯ್ ಅವರು ಧನ್ಯತಾ ಅವರ ಕೊರಳಿಗೆ ತಾಳಿ ಕೊಟ್ಟಿದ್ದಾರೆ. ಈ ಜೋಡಿ ವಧೂ ವರರ ದಿರಿಸಿನಲ್ಲಿ ತುಂಬಾ ಮುದ್ದಾಗಿ ಕಾಣಿಸಿದ್ದಾರೆ.ಡಾಲಿ ಧನಂಜಯ್ ಹಾಗೂ ಧನ್ಯತಾ ಅವರ ಮದುವೆ ಆರತಕ್ಷತೆ ಅದ್ಧೂರಿಯಾಗಿ ನಡೆದಿತ್ತು. ಇದರಲ್ಲಿ ಚಿತ್ರರಂಗದ ಗಣ್ಯರು, ಸೆಲೆಬ್ರಿಟಿಗಳು ಎಲ್ಲರೂ ಭಾಗಿಯಾಗಿದ್ದರು